Bengaluru: ಬೆಂಗಳೂರು ನಗರ (Bangalore city) ಈಗಾಗಲೇ ಒಂದು ಹಂತದಲ್ಲಿ ಬೆಳೆದು ನಿಂತಿದೆ. ಸಾಕಷ್ಟು ಹೊಸ ಕಂಪನಿ (New company), ಕಾರ್ಖಾನೆ ಹಾಗೂ ಕೈಗಾರಿಕೆಗೆ (Factory and Industry) ಅನುವು ಮಾಡಿಕೊಟ್ಟಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ (Govt) ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಅವರು ಅವರು ಸಲಹೆ ನೀಡಿದರು.
ಅರಮನೆ ಮೈದಾನದಲ್ಲಿ (Palace grounds) ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 (Invest Karnataka 2025) ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಚಿವರಾದ ಎಂ.ಬಿ ಪಾಟೀಲ್ (Minister MB Patil) ಅವರ ನೇತೃತ್ವದಲ್ಲಿ ನೂತನ ಕೈಗಾರಿಕಾ ನೀತಿ (New Industrial Policy) ರೂಪಿಸಿದ್ದಾರೆ. ಆ ಮೂಲಕ ಅನೇಕ ಕಾರ್ಯಕ್ರಮ ನಿಮಗಾಗಿ ರೂಪಿಸಲಾಗಿದೆ. ನೀವು ಬೆಂಗಳೂರಿನ ಬಗ್ಗೆ ಹೆಚ್ಚು ಗಮನಹರಿಸಬೇಡಿ. ಬೆಂಗಳೂರು ಹೊರತಾಗಿ ಎರಡನೇ ಹಾಗೂ ಮೂರನೇ ಹಂತದ ನಗರಗಳತ್ತ ಗಮನಹರಿಸಬೇಕು. ನಂಜುಂಡಪ್ಪ ಅವರ ವರದಿ ಆಧಾರದ ಮೇಲೆ ಹಿಂದುಳಿದ ತಾಲೂಕುಗಳನ್ನು ಗುರುತಿಸಲಾಗಿದ್ದು, ಅಲ್ಲಿ ಬಂಡವಾಳ ಹೂಡಿಕೆ (Capital investment) ಮಾಡಿದರೆ ಅನೇಕ ಪ್ರೋತ್ಸಾಹ ಕಾರ್ಯಕ್ರಮ ರೂಪಿಸಲಾಗಿದೆ. ಜತೆಗೆ ತಾಲೂಕು ಮಟ್ಟದಲ್ಲಿ ಕೈಗಾರಿಕಾ ಪ್ರದೇಶ (Industrial area) ರೂಪಿಸುವ ಉದ್ದೇಶವಿದ್ದು, ಎಲ್ಲೆಡೆ ನೀರು ಹಾಗೂ ವಿದ್ಯುತ್ ಸೌಲಭ್ಯ (Water and electricity facility) ನೀಡಲಾಗುವುದು. ಈ ನೂತನ ನೀತಿಯಲ್ಲಿ ದೊಡ್ಡ ಉದ್ಯಮಗಿಳಿಗಿಂತ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ (Industries) ಹೆಚ್ಚಿನ ನೆರವಿನ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಇಲ್ಲಿರುವ ಎಲ್ಲಾ ಉದ್ಯಮಿಗಳು ನಮ್ಮ ರಾಜ್ಯದ ಆಸ್ತಿ (State property). ನೀವು ಬಲಿಷ್ವಾದಷ್ಟು ನಾವು ಬಲಿಷ್ಠವಾಗಿರುತ್ತದೆ. ನೀವು ದುರ್ಬಲವಾದರೆ ನಾವು ದುರ್ಬಲವಾಗುತ್ತೇವೆ ಎಂದು ನಮ್ಮ ಸರ್ಕಾರ (Govt) ನಂಬಿದೆ. ನಮ್ಮ ರಾಜ್ಯದ 7 ಕೋಟಿ ಜನಸಂಖ್ಯೆಯಲ್ಲಿ ಸುಮಾರು 1 ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಿರುವುದು (Job creation) ನಮ್ಮ ರಾಜ್ಯದ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು. ನೀವೆಲ್ಲರೂ ಸರ್ಕಾರಕ್ಕೆ ನೆರವಾಗುತ್ತಿದ್ದೀರಿ. ನೀವು ಚಿಂತೆ ಮಾಡುವುದು ಬೇಡ. ನಿಮಗೆ ಕಡಿಮೆ ಮೊತ್ತದ ಕಾರ್ಮಿಕರು (Workers) ಬೇಕಾದಲ್ಲಿ ನೀವು ಎರಡು ಹಾಗೂ ಮೂರನೇ ಹಂತದ ನಗರಗಳತ್ತ ಮುಖ ಮಾಡಬೇಕು. ಅಲ್ಲಿ ಕೂಡ ಮೂಲಸೌಕರ್ಯ (Infrastructure) ಒದಗಿಸಲಾಗುವುದು. ಈ ಸಮಾವೇಶದಿಂದ 10 ಲಕ್ಷ ಕೋಟಿ ಬಂಡವಾಳ ಹೂಡಿಕೆ (Capital investment) ನಿರೀಕ್ಷೆ ಮಾಡಲಾಗಿದ್ದು, 19 ದೇಶಗಳಿಂದ ಅನೇಕ ಸಂಸ್ಥೆಗಳು ಇಲ್ಲಿ ಹೂಡಿಕೆ ಮಾಡಲು ಒಡಂಬಡಿಕೆ (Covenant) ಮಾಡಿಕೊಂಡಿವೆ. ಇನ್ನು ನಮ್ಮ ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ (New tourism policy) ತರಲಾಗಿದೆ. ಇದರ ಜತೆಗೆ ಕರಾವಳಿ ಭಾಗದಲ್ಲಿ 300 ಕಿ.ಮೀ ಉದ್ದದ ಪ್ರದೇಶಕ್ಕೆ ವಿಶೇಷ ನೀತಿ ರೂಪಿಸಲು ಮುಂದಾಗಿದ್ದೇವೆ. ಹಾಗಾಗಿ ಕೃಷಿ ಕ್ಷೇತ್ರದಲ್ಲೂ (Agricultural sector) ಅನೇಕ ಬಂಡವಾಳ ಹೂಡಿಕೆಗೆ ಮುಂದಾಗಿದ್ದಾರೆ ಎಂದು ಹೇಳಿದರು.