Bellary: ಕಳೆದ ಕೆಲ ದಿನಗಳಿಂದ ಎಲ್ಲರ ಗಮನ ಸೆಳೆದಿದ್ದ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ (Bellary BIMS Hospital) ಗರ್ಭಿಣಿಯರ ಸಾವಿಗೆ (Death of pregnant women) ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ (IV Ringer lactate solution) ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ (Impurity) ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ (State Commission for Women) ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ.
ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ (Operating room) ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ (Bacteria) ಇನ್ಫೆಕ್ಷನ್ (Infection) ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹೆರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ (Maternity swab sample report) ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ (Operating room) ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಐವರು ಬಾಣಂತಿಯರ ಸಾವಿನಿಂದ ಜನರು ಆತಂಕಗೊಂಡಿದ್ದು, ಬಿಮ್ಸ್ಗೆ (BIMS) ದಾಖಲಾಗುವ ಗರ್ಭಿಣಿಯರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ (Bellary District Hospital) ದಾಖಲಾಗುವ ಗರ್ಭಣಿಯರ (Pregnant women) ಸಂಖ್ಯೆ ಶೇ 50 ರಷ್ಟು ಕುಸಿತವಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 585 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ (Govt hospital) ದಾಖಲಾಗಿದ್ದರು. ಅಕ್ಟೋಬರ್ನಲ್ಲಿ 577 ಗರ್ಭೀಣಿಯರು ದಾಖಲಾಗಿದ್ದರು. ನವೆಂಬರ್ ತಿಂಗಳಲ್ಲಿ 289 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಖ್ಯೆ ಡಿಸೆಂಬರ್ ತಿಂಗಳಲ್ಲಿ ದಿಢೀರ್ ಕುಸಿತವಾಗಿದೆ. ಶನಿವಾರ ಡಿಸೆಂಬರ್ 13ನೇ ತಾರೀಖಿನವರಗೆ ಕೇವಲ 80 ಜನ ಗರ್ಭಿಣಿಯರು ದಾಖಲಾಗಿದ್ದಾರೆ