ಮೋದಿ, ಯೋಗಿಗೆ ಕೊಲೆ ಬೆದರಿಕೆ: ದಾವೂದ್​ ಇಬ್ರಾಹಿಂ ಗ್ಯಾಂಗ್​ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿ

ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗ್ಯಾಂಗ್‌ನೊಂದಿಗೆ ಸಂಪರ್ಕ (Death threat to Modi Yogi) ಹೊಂದಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್

ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ (Naredra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹತ್ಯೆಗೆ

ಸಂಚು ರೂಪಿಸಲು ದಾವೂದ್ ಗ್ಯಾಂಗ್ ತನಗೆ ಸೂಚನೆ ನೀಡಿತ್ತು ಎಂದು ಆರೋಪಿ ಈ (Death threat to Modi Yogi) ಕರೆಯಲ್ಲಿ ಹೇಳಿಕೊಂಡಿದ್ದಾನೆ.

ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದು, ಕರೆ ಮಾಡಿದವರು ಜೆಜೆ ಆಸ್ಪತ್ರೆಯನ್ನು (JJ Hospital) ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ. ಪೊಲೀಸರು

ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಆತನನ್ನೂ ಬಂಧಿಸಿದ್ದಾರೆ.

ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಿನಲ್ಲಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ (Mumbai Police Control Room) ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು

ಮುಂಬೈ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಮುಂಬೈ ಪೊಲೀಸರಿಗೆ ಈ ಹಿಂದೆ ಅಕ್ಟೋಬರ್‌ನಲ್ಲಿಯೂ (October) ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು. 500 ಕೋಟಿ ಪಾವತಿಸಲು ಮತ್ತು

ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಬಿಡುಗಡೆ ಮಾಡಲು ಭಾರತ ಸರ್ಕಾರ ವಿಫಲವಾದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಹಮದಾಬಾದ್‌ನಲ್ಲಿರುವ (Ahmedabad)

ಅವರ ಹೆಸರಿನ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಅದನ್ನು ಕಳುಹಿಸುವ ವ್ಯಕ್ತಿ ಬೆದರಿಕೆ ಹಾಕಿದ್ದ.

ಈಗಾಗಲೇ ದಾಳಿ ನಡೆಸಲು ಭಯೋತ್ಪಾದಕ ಗುಂಪು ತನ್ನ ಜನರನ್ನು ನಿಯೋಜಿಸಿದೆ ಎಂದು ಇಮೇಲ್‌ನಲ್ಲಿ ಬರೆಯಲಾಗಿತ್ತು. ಆಗಸ್ಟ್‌ನಲ್ಲಿ ಕೇರಳ ಪೊಲೀಸರು (Kerala Police) ಎರಡು ದಿನಗಳ

ಭೇಟಿಯ ವೇಳೆ ಪ್ರಧಾನಿ ಮೋದಿಯವರ ಮೇಲೆ ಆತ್ಮಹತ್ಯಾ ದಾಳಿಯ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

ಇದನ್ನು ಓದಿ: ಚಿಕ್ಕಮಗಳೂರಿನಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಭೇಟಿ

Exit mobile version