vijaya times advertisements
Visit Channel

ಕುಂವೀ, ನಟ ಪ್ರಕಾಶ್ ರಾಜ್ ಸೇರಿದಂತೆ 16 ಮಂದಿಗೆ ಬೆದರಿಕೆ ಪತ್ರ!

Politics

ಖ್ಯಾತ ನಟ(Actor) ಪ್ರಕಾಶ್ ರಾಜ್(Prakash Raj) ಮತ್ತು ಸಾಹಿತಿ(Poet) ಕುಂ. ವೀರಭದ್ರಪ್ಪ(Kum Veerbhadrappa) ಸೇರಿದಂತೆ 16 ಮಂದಿ ಎಡಪಂಥೀಯ ಚಿಂತಕರಿಗೆ ಜೀವ ಬೆದರಿಕೆ ಪತ್ರ ಬಂದಿದೆ.

Actor

ಇನ್ನು ಈ ಕುರಿತು ಸಾಹಿತಿ ಕುಂ. ವೀರಭದ್ರಪ್ಪ ವಿಜಯನಗರ ಜಿಲ್ಲೆಯ(Vijayanagar District) ಕೊಟ್ಟೂರು(Kottur) ಪಟ್ಟಣದಲ್ಲಿರುವ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದಾರೆ. ಈ ಹಿಂದೆಯೂ ಸಾಹಿತಿ ಕುಂ. ವೀರಭದ್ರಪ್ಪನವರಿಗೆ ಚಿತ್ರದುರ್ಗ(Chitradurga) ಮತ್ತು ಭದ್ರಾವತಿಯಿಂದಲೂ(Bhadravathi) ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರದಲ್ಲಿ “ಮಿಸ್ಟರ್ ಕುಂ. ವೀರಭದ್ರಪ್ಪನವರೇ, ನನಗೆ ಪೇಪರ್ ಹುಲಿ ಆಗುವುದಕ್ಕೆ ಇಷ್ಟವಿದ್ದರೇ, ನಿಮ್ಮ ಮೇಲೆ ನೇರವಾಗಿ ದಾಳಿ ಮಾಡಿ ನಾನೇ ಪೊಲೀಸರಿಗೆ ಶರಣಾಗುತ್ತಿದ್ದೆ.

ಆದರೆ ನನಗೆ ಪೇಪರ್ ಹುಲಿ ಆಗಲು ಇಷ್ಟವಿಲ್ಲ. ಹೀಗಾಗಿ ಈ ಪತ್ರ ಬರೆಯುತ್ತಿದ್ದೇನೆ. ನಾನು ಒಬ್ಬಂಟಿಯಾಗಿ ಹೋರಾಟ ಮಾಡುತ್ತೇನೆ” ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಇನ್ನು ಈ ಬೆದರಿಕೆ ಪತ್ರದ ಕುರಿತು ಸೂಕ್ತ ತನಿಖೆ ನಡೆಸುವಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಉನ್ನತ ಪೊಲೀಸ್ ಆಧಿಕಾರಿಗಳಿಂದ ಸೂಚನೆ ನೀಡಲಾಗಿದೆ. ಕುಂ. ವೀರಭದ್ರಪ್ಪನವರಿಗೆ ಇದು 3ನೇ ಬೆದರಿಕೆ ಪತ್ರವಾಗಿದ್ದು, ವಿಜಯನಗರ ಜಿಲ್ಲಾ ಪೊಲೀಸರು ಈ ಕುರಿತು ಗಂಭೀರ ತನಿಖೆ ನಡೆಸಲು ಮುಂದಾಗಿದ್ದಾರೆ.

literature

ಕುಂ.ವೀರಭದ್ರಪ್ಪನವರು ನನಗೆ ಸೂಕ್ತ ರಕ್ಷಣೆ ನೀಡುವಂತೆ ವಿಜಯನಗರ ಜಿಲ್ಲಾ ಎಸ್ಪಿ ಡಾ. ಅರುಣ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಇನ್ನು ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕರಿಗೆ ಬೆದರಿಕೆ ಪತ್ರ ಬಂದಿತ್ತು. ಈಗ ಮತ್ತೆ ಬೆದರಿಕೆ ಪತ್ರ ಬಂದಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.