ಡಿಸೆಂಬರ್ 8ರಂದು ಭಾರತ್ ಬಂದ್‌ಗೆ ಕರೆ ನೀಡಿದ ರೈತ ಮುಖಂಡರು

ನವದೆಹಲಿ, ಡಿ. 04: ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ಡಿಸೆಂಬರ್‌ 8ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

‘ನಿನ್ನೆ ನಾವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ (ಸಭೆಯಲ್ಲಿ) ಹೇಳಿದ್ದೇವು. ಡಿಸೆಂಬರ್ 8ರಂದು ಭಾರತ್ ಬಂದ್ ಗೆ ಕರೆ ನೀಡಿದ್ದೇವೆʼ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು-ಲಖೋವಲ್) ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

‘ನಾವು ಈ ಪ್ರತಿಭಟನೆಯನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಸರಕಾರ ಕೃಷಿ ಕಾಯಿದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು’ ಎಂದು ಸಿಂಗು ಗಡಿಯಲ್ಲಿಅಖಿಲ ಭಾರತ ಕಿಸಾನ್ ಸಭಾಪ್ರಧಾನ ಕಾರ್ಯದರ್ಶಿ ಹನ್ನಾನ್ ಮೊಲ್ಲಾ ಹೇಳಿದರು.

Exit mobile version