ಕರ್ನಾಟಕದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೆ 1 ಕೋಟಿ ರೂ.ನೀಡಿ, ಬಸವರಾಜ ಬೊಮ್ಮಾಯಿ ಆಗ್ರಹ

Karnataka: ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ಬರಗಾಲ ಘೋಷಣೆ ಮಾಡುವಂತೆ ಮಾಜಿ ಸಿಎಂ ಬಸವರಾಜ (Declare drought in Karnataka) ಬೊಮ್ಮಾಯಿ ರಾಜ್ಯ ಸರ್ಕಾರವನ್ನು

ಆಗ್ರಹಿಸಿದ್ದಾರೆ. ಅದಲ್ಲದೇ ಮಳೆ ಇಲ್ಲದ ಕಾರಣ 7 ಲಕ್ಷ ಹೆಕ್ಟೇರ್‌ ಬಿತ್ತನೆಯಾಗುವ ಕಡೆ ಕೇವಲ 1 ಲಕ್ಷ ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ ಹಾಗಾಗಿ ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂಪಾಯಿ ನೀಡಬೇಕು

ಎಂದು ಒತ್ತಾಯಿಸಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿದ್ದು, ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ

ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಉತ್ತೇಜಿಸಿದ್ದಾರೆ.

ಚಂದ್ರಯಾನ ಬೆನ್ನಲ್ಲೇ ಗಗನಯಾನಕ್ಕೆ ಮಾನವ ಜಿಗಿತಕ್ಕೆ ಇಸ್ರೋ ಸಜ್ಜು

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ ಎಂದು ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಮಾತನಾಡಿದ ಅವರು ನಿಗದಿತ ಸಮಯಕ್ಕೂ ಮಳೆ

ಬಂದಿಲ್ಲ, ಮಳೆ ಬಾರದ ಕಾರಣ ರೈತರು ಬಿತ್ತನೆ ಬೀಜಗಳನ್ನು ಹಾಕಿಲ್ಲ, ಜುಲೈ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿದೆ ಆದರೆ ಎಲ್ಲ ಕಡೆಯೂ ಮಳೆಯಾಗಿಲ್ಲ ಎಂದು ಹೇಳಿದರು.

ತುಂಬಾ ಜನರು ಮೊದಲ ಬಾರಿ ಬಿತ್ತನೆ ಮಾಡಿದ್ದಾರೆ. ಅಲ್ಲದೆ ಎರಡನೇ ಸಲವೂ ಬಿತ್ತನೆ ಮಾಡಿದ್ದಾರೆ. ಮೊಳಕೆ ಬಂದಿಲ್ಲ. ಇದುವರೆಗೂ 7 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬೇಕಿತ್ತು. ಆದರೆ

ಮಳೆ ಇಲ್ಲದೇ ಬರೀ 1 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ ಸರ್ಕಾರ ಇದನ್ನು ಬರಗಾಲ ಪೀಡಿತ ಪ್ರದೇಶ ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಇವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ

ವಿರೋಧ ಪಕ್ಷಗಳ ಸಭೆ ನಡೆಸುವುದಕ್ಕೆ ತಮ್ಮೆಲ್ಲ ಸಮಯವನ್ನು ಮೀಸಲಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ.

ಇದೊಂದು ರೈತ ವಿರೋಧಿ ಸರ್ಕಾರ ಎಂದು (Declare drought in Karnataka) ಆರೋಪಿಸಿದರು.

ಮುಂಗಾರು ಕೈ ಕೊಟ್ಟ ಕಾರಣ, ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ. ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ.

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಹಾಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ‌, ಈ ಹಿಂದೆ 2013-18ರಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಮತ್ತೆ ಇದು ಮರುಕಳಿಸುತ್ತಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ಇದನ್ನು ಖಂಡಿಸುತ್ತೇನೆ. ಸರ್ಕಾರ ಕೂಡಲೇ ಎಲ್ಲ ಕ್ರಮ ಕೈಗೊಳ್ಳಲು ನಾನು

ಆಗ್ರಹಿಸುತ್ತೇನೆ ಎಂದು ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.

Exit mobile version