ಇಳಿಕೆ ಕಾಣುತ್ತಿರುವ ಕೊರೊನಾ: ಪಾಸಿಟಿವಿಟಿ ರೇಟ್‌ ಶೇ 3.24

ನವದೆಹಲಿ,ಜೂ.18: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಕಳೆದ ಹನ್ನೊಂದು ದಿನಗಳಿಂದ ಪಾಸಿಟಿವಿಟಿ ದರ ನಿರಂತರವಾಗಿ ಶೇ 5ಕ್ಕಿಂತ ಕಡಿಮೆ ದಾಖಲಾಗಿದೆ. ಪ್ರಸ್ತುತ ಪಾಸಿಟಿವಿಟಿ ರೇಟ್‌ ಶೇ 3.24ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ಒಟ್ಟು 62,480 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 2,97, 62,793 ಆಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 1587. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ 3,83,490 ಆಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,98,656ಕ್ಕೆ ಇಳಿದಿದೆ. ಇದೇ ರೀತಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ ಶೇ 96.03ಕ್ಕೆ ಏರಿದೆ. ದೇಶದಲ್ಲಿ ಇಲ್ಲಿವರೆಗೆ 38,71,67,696 ಜನರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿದೆ. ಗುರುವಾರ ಒಂದೇ ದಿನ 19,29,476 ಜನರಿಗೆ ಕೊರೊನಾ ಸೋಂಕು ಪರೀಕ್ಷಿಸಲಾಗಿದೆ.

Exit mobile version