ದೆಹಲಿಯಲ್ಲಿ ಆರೆಂಜ್ ಅಲರ್ಟ್, ಪಂಜಾಬ್‌ನಲ್ಲಿ ರೆಡ್ ಅಲರ್ಟ್!

ನವದೆಹಲಿ, ಡಿ. 29: ಹಲವು ದಿನಗಳಿಂದ ದೆಹಲಿಯಲ್ಲಿ ಚಳಿ ತಿವ್ರತೆ ಹೆಚ್ಚಾಗಿದ್ದು ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದಾದ್ಯಂತ ಭಾರೀ ಶೀತಗಾಳಿ ಬೀಸುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ದೆಹಲಿ – ಎನ್‌ಸಿಆರ್‌ಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಹಾಗೂ ಪಂಜಾಬ್‌ಗೆ ರೆಡ್ ಅಲರ್ಟ್ ಘೋಷಿಸಿದೆ.

ಡಿಸೆಂಬರ್ 31 ಹಾಗೂ ಜನವರಿ 1ರಂದು ರಕ್ತಹೆಪ್ಪುಗಟ್ಟಿಸುವಂತಹ ಶೀತ ಗಾಳಿ ಬೀಸಲಿರುವ ನಿಟ್ಟಿನಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಅನ್ನು ಕೂಡಾ ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ.

ಮುಂದಿನ ನಾಲ್ಕೈದು ದಿನಗಳ ಕಾಲ ಪಂಜಾಬ್, ಹರಿಯಾಣ, ಚಂಡೀಗಢ್, ದೆಹಲಿ ಹಾಗೂ ಉತ್ತರಾಖಂಡ್ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಪ್ರಮಾಣದ ದಟ್ಟ ಮಂಜಿನ ವಾತಾವರಣ ಇರಲಿದೆ. ಮುಂದಿನ ಮೂರು ದಿನಗಳ ಕಾಲ ಉತ್ತರ ಪ್ರದೇಶದಲ್ಲಿ ಹಾಗೂ ಎರಡು ದಿನಗಳ ಕಾಲ ರಾಜಸ್ಥಾನದಲ್ಲಿ ದಟ್ಟ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ವಿವರಿಸಿದೆ.

8.30ಕ್ಕೆ ಸಫ್ದರ್ ಜಂಗ್ ನಲ್ಲಿ ದಾಖಲೆಯ 3.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗುವ ಸಾಧ್ಯತೆ ಇದ್ದಿರುವುದಾಗಿ ಐಎಂಡಿ ತಿಳಿಸಿದೆ.ಮುಂದಿನ ನಾಲ್ಕು ದಿನಗಳ ಕಾಲ ದೆಹಲಿಯ ವಿವಿಧೆಡೆ ಭರ್ಜರಿ ಚಳಿ ಗಾಳಿ ಬೀಸಲದೆ ಎಂದು ಹವಾಮಾನ ಇಲಾಖೆ ವಿವರಿಸಿದೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.