New Delhi : ದೆಹಲಿ ವಿಧಾನಸಭಾ ಚುನಾವಣೆ (Delhi Assembly Elections) ಘೋಷಣೆಯಾಗಿದ್ದು ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ (Counting of votes) ನಡೆಯಲಿದೆ. ಇನ್ನು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ (Central Election Commission) ತಿಳಿಸಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Chief Election Commissioner Rajeev Kumar) ಅವರು ಇಂದು ಮಾಧ್ಯಮಗೋಷ್ಠಿ ನಡೆಸಿ ಚುನಾವಣೆ ಕುರಿತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ (Delhi Legislative Assembly) ಅವಧಿ ಫೆಬ್ರುವರಿ 23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ವಿಧಾನಸಭಾ ಚುನಾವಣೆ (Assembly election) ನಡೆಯಲಿದೆ.

ಸದ್ಯ ಆಡಳಿತದಲ್ಲಿರುವ ಆಮ್ ಆದ್ಮಿ ಪಕ್ಷ (Aam Aadmi Party) ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾಲಿ ಮುಖ್ಯಮಂತ್ರಿ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇನ್ನೊಂದೆಡೆ ಪ್ರಮುಖ ವಿರೋಧ ಪಕ್ಷ ಬಿಜೆಪಿ (BJP) 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದಿದ್ದ ಮಾಜಿ ಸಚಿವ ಕೈಲಾಶ್ ಗೆಹ್ಲೋಟ್ (Former minister Kailash Gehlot) ಬಿಜವಸನ್ನಿಂದ ಸ್ಪರ್ಧಿಸುತ್ತಿದ್ದಾರೆ. ಪಟೇಲ್ ನಗರದಿಂದ ರಾಜ್ ಕುಮಾರ್, ದೆಹಲಿಯ (Delhi) ಮಾಜಿ ಕಾಂಗ್ರೆಸ್ ಮುಖ್ಯಸ್ಥ (Congress chief) ಅರವಿಂದ್ ಸಿಂಗ್ ಲವ್ಲಿ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ.
ಇನ್ನು ಕಾಂಗ್ರೆಸ್ (Congress) 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದೆ. ಮಾಜಿ ಸಿಎಂ ಶೀಲಾ ದೀಕ್ಷಿತ್ (Former CM Sheila Dixit) ಮಗ ಸಂದೀಪ್ ದೀಕ್ಷಿತ್ ಈ ಬಾರಿ ವಿಧಾನಸಭಾ ಚುನಾವಣೆ ಕಣಕ್ಕಿಳಿದಿದ್ದಾರೆ. ಎರಡು ಬಾರಿ ಸಂಸದರಾಗಿದ್ದ ದೀಕ್ಷಿತ್ ಈ ಬಾರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಕಣಕ್ಕಿಳಿಯಲಿದ್ದಾರೆ. 2013 ಮತ್ತ 2015ರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಸಿಎಂ ಶೀಲಾ ದೀಕ್ಷಿತ್ ವಿರುದ್ದ ಗೆಲುವು ಸಾಧಿಸಿದ್ದರು. ಆಮ್ ಆದ್ಮಿ ಪಕ್ಷವು (Aam Aadmi Party) 2015 ಮತ್ತು 2020ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ 67 ಮತ್ತು 62 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಏರಿತ್ತು. ಬಿಜೆಪಿಯು 1998ರ ನಂತರ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ.