ನವದೆಹಲಿ, ಜ. 27: ದೆಹಲಿಯಲ್ಲಿ ನಿನ್ನೆ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮಿತಿ ಮೀರಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಘಟನೆಗಳ 10 ಮುಖಂಡರ ವಿರುದ್ಧ FIR ದಾಖಲಿಸಲಾಗಿದೆ.
ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ 200 ಜನರನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, 22 ಮಂದಿಯ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ.
ಅದ್ರಂತೆ, ರೈತ ಸಂಘಟನೆಗಳ 10 ರೈತ ಮುಖಂಡರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದ್ದ, ಅದ್ರಲ್ಲಿ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಜೋಗಿಂದರ್, ಬೂಟಾ ಸಿಂಗ್ ಹಾಗೂ ರಾಜೇಂದ್ರ ಸಿಂಗ್ ಇದ್ದಾರೆ.
ಗಲಭೆ, ಸಾರ್ವಜನಿಕ ಆಸ್ತಿ ಹಾನಿ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ʼಗಳ ಅಡಿಯಲ್ಲಿ ಪ್ರಕರಣಗಳನ್ನ ದಾಖಲಿಸಿಕೊಂಡಿರೋದಾಗಿ ದೆಹಲಿ ಪೊಲೀಸ್ ವಕ್ತಾರ ಅನಿಲ್ ಮಿತ್ತಲ್ ತಿಳಿಸಿದ್ದಾರೆ.
ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ವರದಿಗಳನ್ನ ದಾಖಲಿಸುವ ಸಾಧ್ಯತೆಯಿದೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನ ಗುರುತಿಸುವ ಕಾರ್ಯ ಮುಂದುವೆರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈತರು ರ್ಯಾಲಿ ಹೆಸರಲ್ಲಿ ತಮ್ಮ ಮಿತಿಯನ್ನು ಮೀರಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.