ದೆಹಲಿ ಲಾಕ್ ಡೌನ್ ಸಡಿಲಿಕೆ ಆರಂಭ: ಮಾರ್ಗಸೂಚಿ ಪಾಲಿಸುವಂತೆ ಸಿಎಂ ಮನವಿ

ನವದೆಹಲಿ, ಜೂ. 07: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುತ್ತಿದ್ದು, ಈ ವೇಳೆ ಜನರು ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸೋಮವಾರದಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೆ ಸೋಂಕನ್ನು ನಿಯಂತ್ರಿಸಲು ನಾವೆಲ್ಲರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಆಗಾಗ ಕೈಗಳನ್ನು ಶುಚಿಗೊಳಿಸುವುದನ್ನು ಮಾಡುತ್ತಿರಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಟ್ವೀಟ್‌ ಮಾಡಿದ್ದಾರೆ.

ಮಾಲ್ ಗಳು, ಮಾರುಕಟ್ಟೆ ಮತ್ತು ಮಾರುಕಟ್ಟೆ ಮಳಿಗೆಗಳು(ಸಾಪ್ತಾಹಿಕ ಮಾರುಕಟ್ಟೆಗಳನ್ನು ಹೊರತುಪಡಿಸಿ) ಸೋಮವಾರದಿಂದ ಸಮ–ಬೆಸ ಸಂಖ್ಯೆಯ ಆಧಾರದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿದೆ. ಮೇ 20ರಿಂದ ಡಿಎಂಆರ್‌ಸಿ ಮೆಟ್ರೊ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಿತ್ತು. ಇದೀಗ ಕೊರೊನಾ ಪ್ರಕರಣಗಳು ಇಳಿಕೆಯಾದ್ದರಿಂದ ಸೋಮವಾರದಿಂದ ಮೆಟ್ರೊ ಸೇವೆಗಳು ಆರಂಭಗೊಂಡಿದೆ.

Exit mobile version