ಗ್ಯಾಂಗ್ ರೇಪ್ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಸಿ.ಟಿ. ರವಿ

 ಚಿಕ್ಕಮಗಳೂರು ಆ 27 :ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಗಣಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಒಂದು, ಎರಡು ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳಲಾಗುವುದಿಲ್ಲ. ಆದರೆ ಮುಂದೆ ಇಂತಹ ಘಟನೆಯಗಳು ನಡೆಯದಂತೆ ಎಚ್ಚರವಹಿಸಬೇಕಿದೆ ಎಂದರು. ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಂತಹ ಪ್ರಕರಣಗಳಿಂದ ಸಾಂಸ್ಕೃತಿಕ ನಗರಿಗೆ ಕಪ್ಪು ಚುಕ್ಕೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.

ಘಟನೆ ವಿವರ : ಉತ್ತರ ಭಾರತ ಮೂಲದ ಯುವತಿ ನಗರದ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಾಂಗ ಮಾಡುತ್ತಿದ್ದು ನಿನ್ನೆ ಸೇಹಿತನ ಜೊತೆಗೆ ವಾಟರ್ ಟ್ಯಾಂಕ್​​​​ನ ಗುಡ್ಡದ ಬಳಿ ಕುಳಿತಿದ್ದ ಸಂದರ್ಭದಲ್ಲಿ ಸುಮಾರು 5 ಜನ ಕಾಮುಕರು ಆಗಮಿಸಿ ಯುವಕ ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿ ನಂತರ ಕಾಮುಕರು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸದ್ಯ ಯುವತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Exit mobile version