ಬಿಜೆಪಿ ವಿರುದ್ಧ ಏಕತೆ ಪ್ರದರ್ಶಿಸಿ: ಸೋನಿಯಾ ಗಾಂಧಿ ಸೇರಿ 15 ವಿರೋಧ ಪಕ್ಷದ ನಾಯಕರಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಬೆಂಗಳೂರು, ಮಾ. 31: ಮುಂಬರುವ ವಿಧಾನಸಭಾ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಏಕತೆ ಪ್ರದರ್ಶಿಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಮೂರು ಪುಟಗಳ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೇಲೆ ನಡೆಸುತ್ತಿರುವ ದಹನಕಾರಿ ನೀತಿಯ ವಿರುದ್ಧ ತಮಗಿರುವ ಕಳವಳವನ್ನು ತಿಳಿಸುವ ಸಲುವಾಗಿ ಈ ಪತ್ರ ಬರೆಯುತ್ತಿರುವುದಾಗಿ ತಿಳಿಸಿದ್ದಾರೆ.

ತಮ್ಮ ಈ ಕಳಕಳಿಯ ಕುರಿತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, 15 ಮಂದಿ ವಿರೋಧ ಪಕ್ಷದ ಪ್ರಮುಖ ನಾಯಕರಿಗೆ ಪತ್ರ ಬರೆದಿದ್ದಾರೆ. ಅದರಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, NCP ಮುಖ್ಯಸ್ಥ ಶರದ್ ಪವಾರ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ, RJD ಮುಖ್ಯಸ್ಥ ತೇಜಸ್ವಿ ಯಾದವ್, SP ಮುಖ್ಯಸ್ಥ ಅಖಿಲೇಶ್ ಯಾದವ್, NC ಮುಖ್ಯಸ್ಥ ಫರೂಕ್ ಅಬ್ದುಲ್ಲಾ ಹಾಗೂ ಪಿಪಿಡಿ ಮುಖ್ಯಸ್ಥ ಮೆಹಬೂಬ್ ಮಫ್ತಿ ಅವರುಗಳಿಗೆ ಪತ್ರ ಬರೆದಿದ್ದಾರೆ.

Exit mobile version