ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದಂತೆ ಎಲ್ಲಾ ವೈದ್ಯರ ರಜೆಗಳನ್ನು ರದ್ದುಗೊಳಿಸಿದ ಯುಪಿ ಸರ್ಕಾರ!

Uttar Pradesh : ಉತ್ತರಪ್ರದೇಶದ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು (Dengue Cases Rise In UP) ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ,

ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿದ ಉತ್ತರಪ್ರದೇಶ ಸರ್ಕಾರವು ರಾಜ್ಯದ ಎಲ್ಲಾ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ರಜೆಗಳನ್ನು ಬುಧವಾರ ರದ್ದುಗೊಳಿಸಿದೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ (Dengue Cases Rise In UP) ಅವರು ಈ ಬಗ್ಗೆ ಮಾತನಾಡಿದ್ದು, “ಹರಡುವಿಕೆಯನ್ನು ತಪ್ಪಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಸದ್ಯ ಪ್ರಕರಣಗಳು ಕಡಿಮೆ ಇದೆ. ಆದ್ರೆ, ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ ಮತ್ತು ಸಾಕಷ್ಟು ಪ್ಲೇಟ್‌ಲೆಟ್‌ಗಳಿಗೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಎಲ್ಲಾ ಸರ್ಕಾರಿ ವೈದ್ಯರು ಮತ್ತು ಆರೋಗ್ಯ ಸಂಬಂಧಿತ ವರ್ಗದವರ ರಜೆಗಳನ್ನು ರದ್ದುಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಎಎನ್‌ಐ(ANI) ಸಂಸ್ಥೆಗೆ ಉಲ್ಲೇಖಿಸಿ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ, ಫಿರೋಜಾಬಾದ್, ಆಗ್ರಾ ಮತ್ತು ಇಟಾವಾ ಜಿಲ್ಲೆಗಳಲ್ಲಿ ಡೆಂಗ್ಯೂ ನಿರ್ವಹಣೆಗೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಅಧಿಕಾರಿಗಳ ಸಹಯೋಗದೊಂದಿಗೆ ಕೇಂದ್ರವು ಆರು ಸದಸ್ಯರ ಉನ್ನತ ಮಟ್ಟದ ತಂಡವನ್ನು ಉತ್ತರ ಪ್ರದೇಶಕ್ಕೆ ನಿಯೋಜಿಸಿತು.

https://youtu.be/T_ePA5EF1Go

ಈ ತಂಡವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ವೆಕ್ಟರ್ ಆಶ್ರಿತ ರೋಗಗಳ ನಿಯಂತ್ರಣ ರಾಷ್ಟ್ರೀಯ ಕೇಂದ್ರ ಮತ್ತು ಡಾ. ಆರ್‌ಎಂಎಲ್ ಆಸ್ಪತ್ರೆ,

ನವದೆಹಲಿಯ ತಜ್ಞರನ್ನು ಒಳಗೊಂಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಫಿರೋಜಾಬಾದ್,

ಇದನ್ನೂ ಓದಿ : https://vijayatimes.com/controversial-statement-for-kantara/

ಆಗ್ರಾ ಮತ್ತು ಇಟಾವಾ ಜಿಲ್ಲೆಗಳಲ್ಲಿ ಡೆಂಗ್ಯೂ ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸ್ಥಾಪಿಸಲು ರಾಜ್ಯ ಆರೋಗ್ಯ ಪ್ರಾಧಿಕಾರಗಳೊಂದಿಗೆ,ಸಹಕರಿಸಲು ಉನ್ನತ ಮಟ್ಟದ ಬಹು-ಶಿಸ್ತಿನ ತಂಡವನ್ನು ಉತ್ತರ ಪ್ರದೇಶಕ್ಕೆ ನಿಯೋಜಿಸಲು ನಿರ್ಧರಿಸಿದೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯದಲ್ಲಿ ಇದುವರೆಗೆ 3 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎನ್ನಲಾಗಿದೆ.

ಈ ತಿಂಗಳ ಆರಂಭದಲ್ಲಿ, ಸೊಳ್ಳೆಗಳ (Mosquito) ಸಂತಾನೋತ್ಪತ್ತಿಗೆ ಅನುಕೂಲವಾಗುವ ತಾಣಗಳ ಸಂಖ್ಯೆ ಹೆಚ್ಚಾಗುವುದರಿಂದ ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಈ ವರ್ಷದ ಜನವರಿ ಮತ್ತು ಸೆಪ್ಟೆಂಬರ್ ನಡುವೆ ರಾಜ್ಯದಲ್ಲಿ 2,103 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ನಡುವೆ ದೆಹಲಿಯಲ್ಲಿ ಅಕ್ಟೋಬರ್ 6 ರಿಂದ 12 ರವರೆಗೆ 314 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂಬುದು ಸದ್ಯದ ವರದಿ.
Exit mobile version