ಪರಿಶಿಷ್ಟ ಜಾತಿಯವನು ಎನ್ನುವ ಕಾರಣಕ್ಕೆ ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶಕ್ಕೆ ಬಿಡಲಿಲ್ಲ: ಗೂಳಿಹಟ್ಟಿ ಶೇಖರ್

ಹೊಸದುರ್ಗ (Hosadurga) ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti Shekar) ಅವರು ನಾನು ಪರಿಶಿಷ್ಠ ಜಾತಿಯವನು (Denied Entry – RSS Museum) ಎಂಬ ಕಾರಣಕ್ಕೆ ನಾಗಪುರದ

ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್‌ಎಸ್‌ಎಸ್‌ ಮುಖಂಡ ಬಿ.ಎಲ್. ಸಂತೋಷ್ (B L Santhosh)

ಅವರಲ್ಲಿ ಮನವಿ (Denied Entry – RSS Museum) ಮಾಡಿಕೊಂಡಿದ್ದಾರೆ.

ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (B L Santhosh) ಅವರಿಗೆ ಆಡಿಯೋ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದ್ದು,

‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್ (RSS) ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ.

ಸ್ನೇಹಿತರ ಜೊತೆಗೆ ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಮಹಾರಾಷ್ಟ್ರದ (Maharashtra) ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ.

ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು.

ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

ನನ್ನೊಂದಿಗೆ ಬಂದಿದ್ದ ಇಬ್ಬರು ಸ್ನೇಹಿತರು ಮಾತ್ರ ಒಳಗೆ ಹೋದರು. ಪರವಾಗಿಲ್ಲ ಎಂದು ಹೇಳಿದ ನಾನು, ಹೊರಗೆ ಕಾಯುತ್ತಾ ಕುಳಿತುಕೊಂಡೆ. ಗೋವಿಂದ ಕಾರಜೋಳ ಹಾಗೂ ಸಂಸದ ಆನೇಕಲ್

ನಾರಾಯಣಸ್ವಾಮಿ (Anekal Narayanaswamy) ಅವರಿಗೂ ಪ್ರವೇಶ ನಿರಾಕರಿಸಲಾಗಿತ್ತಾ? ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಬಿ.ಎಲ್. ಸಂತೋಷ್

ಅವರಲ್ಲಿ ಮನವಿ ಮಾಡಿದ್ದಾರೆ.

ಮ್ಯೂಸಿಯಂ (Museum) ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶ ದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು

ತಡೆದರು. ತಪ್ಪು ತಿಳಿಯಬೇಡಿ, ನೀವು ಮೀಸಲಾತಿ ಪಡೆದುಕೊಳ್ಳುವ ಜಾತಿಗೆ ಸೇರಿದ್ದೀರಾ ಎಂದು ಕೇಳಿದರು. ನಾನು ಹೌದು ಎಂದಿದ್ದಕ್ಕೆ ನನಗೆ ಪ್ರವೇಶ ನಿರಾಕರಿಸಿದರು.

ಇದನ್ನು ಓದಿ: ಗೋರಕ್‌ಪುರ ಆಸ್ಪತ್ರೆ ದುರಂತ: ಈ ಪುಸ್ತಕ ಪ್ರಕಟಿಸಿದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

Exit mobile version