ಅತ್ಯಂತ ಕಡಿಮೆ ಭ್ರಷ್ಟಾಚಾರ ಹೊಂದಿರುವ ರಾಷ್ಟ್ರ ಡೆನ್ಮಾರ್ಕ್ ; ಭ್ರಷ್ಟಾಚಾರದ ನಿಯಂತ್ರಣಕ್ಕೆ ಈ ಸರ್ಕಾರ ತೆಗೆದುಕೊಂಡ ಕ್ರಮಗಳು ಹೀಗಿವೆ!

ಡೆನ್ಮಾರ್ಕ್(Denmark) ದೇಶವು(Country) ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ. ಇದು ಇಡೀ ವಿಶ್ವದಲ್ಲೇ ಅತ್ಯಂತ ಖುಷಿಯಾಗಿರುವ ಜನರನ್ನು ಹೊಂದಿರುವ ದೇಶವಂತೆ! ವಿಶ್ವ ಸಂತೋಷ ದಿನದ ಅಂಗವಾಗಿ ‘ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್’(World Happiness Report) ಈ ವರದಿಯನ್ನು ಬಿಡುಗಡೆ ಮಾಡಿದೆ.

156 ದೇಶಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ, ಈ ಭೂಮಿಯ ಮೇಲೆ ಡೆನ್ಮಾರ್ಕ್ ದೇಶ ಅತ್ಯಂತ ಸುಖ ಸಂತೋಷವನ್ನು ಹೊಂದಿರುವ ಜನರನ್ನು ಒಳಗೊಂಡ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವಸಂಸ್ಥೆ ಇದನ್ನು ಅಧಿಕೃತವಾಗಿ ಪ್ರಕಟಿಸಿದೆ. ನಮ್ಮ ಭಾರತ ದೇಶ 118ನೇ ಸ್ಥಾನ ಗಳಿಸಿದೆ, ಆಫ್ರಿಕಾ ಖಂಡದ ಬುರುಂಡಿಯ ಜನ ಹೆಚ್ಚು ಅಸಂತೋಷದಿಂದ ಕೂಡಿದ್ದು, ಕೊನೆಯ ಸ್ಥಾನದಲ್ಲಿದೆ. ಡೆನ್ಮಾರ್ಕ್ ನ ನಂತರ ಸ್ವಿಜರ್ಲೆಂಡ್, ಐಸ್ಲೆಂಡ್, ನಾರ್ವೆ, ಫಿನ್ಲೆಂಡ್, ಕೆನಡಾ, ನೆದರ್ಲೆಂಡ್, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ಸ್ವೀಡನ್ ದೇಶಗಳು ಟಾಪ್ 10 ರಲ್ಲಿವೆ.


5.6 ದಶಲಕ್ಷ ಜನರನ್ನು ಹೊಂದಿರುವ ಡೆನ್ಮಾರ್ಕ್ ಈ ಹಿಂದೆ ಕೂಡ ಭೂಮಿ ಮೇಲಿನ ಅತ್ಯಂತ ಸಂತೋಷದ ದೇಶ ಎಂಬ ಕೀರ್ತಿಗೆ ಭಾಜನವಾಗಿತ್ತು. 2012 ರಿಂದ ಮೂರು ಬಾರಿ ಈ ಗೌರವಕ್ಕೆ ಪಾತ್ರವಾಗಿದೆ. ಈ ಸಮೀಕ್ಷೆಯಲ್ಲಿ, ದೇಶದ ಜನರ ಆರೋಗ್ಯ, ವೈದ್ಯಕೀಯ ಸೌಲಭ್ಯ, ಕುಟುಂಬ ಸದಸ್ಯರ ಮಧ್ಯೆ ಇರುವ ಸಂಬಂಧಗಳು, ಉದ್ಯೋಗ ಭದ್ರತೆ ಮತ್ತು ಇತರ ಸಾಮಾಜಿಕ ಕಾರಣಗಳು, ರಾಜಕೀಯ ಸ್ವಾತಂತ್ರ್ಯ ಮತ್ತು ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರದ ಪ್ರಮಾಣವನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.


ಪ್ರಪಂಚದಲ್ಲಿ ಅತ್ಯಂತ ಕಡಿಮೆ ಭ್ರಷ್ಟಾಚಾರ ಹೊಂದಿರುವ ದೇಶ ಎನ್ನುವ ಕೀರ್ತಿಗೆ ಕೂಡ ಡೆನ್ಮಾರ್ಕ್ ಪಾತ್ರವಾಗಿದೆ. ಡೆನ್ಮಾರ್ಕ್ ನಲ್ಲಿ ಶೇ 43% ರಷ್ಟು ಮಂದಿ ಮಹಿಳೆಯರು ಸರ್ಕಾರಿ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಜನರು ಕಷ್ಟದಲ್ಲಿದ್ದಾಗ ಅಲ್ಲಿನ ಸರ್ಕಾರ ಹೆಚ್ಚೆಚ್ಚು ಸಹಕಾರ ನೀಡುವುದರಿಂದ, ದೇಶದಲ್ಲಿ ಭ್ರಷ್ಟಾಚಾರದ ಪ್ರಮಾಣ ಕಡಿಮೆ ಎನ್ನುತ್ತದೆ ಅಧ್ಯಯನ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.