Bengaluru: ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯೂಟಿ ಡೈರೆಕ್ಟರ್ (Deputy Director) ಪ್ರತಿಮಾ (Pratima) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ತನಿಖೆ ಚುರುಕುಗೊಳಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಇದೀಗ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್ ಎಂಬುವಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಸುಮಾರು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ನನ್ನು ಪ್ರತಿಮಾ ಅವರು ಕೆಲಸದಿಂದ ತೆಗೆದುಹಾಕಿದ್ದರು. ಈ ಕಾರಣದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಕಿರಣ್ನನ್ನು (Kiran) ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ಗುತ್ತಿಗೆ ಆಧಾರದ ಮೇಲೆ ಕಿರಣ್ ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಆದರೆ ಪ್ರತಿಮಾ ಅವರು ಕಿರಣ್ನನ್ನು ಕೆಲಸದಿಂದ ತೆಗೆದುಹಾಕಿದ್ದರು. ಹಾಗಾಗಿ ಕಿರಣನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಇನ್ನು ಗಮನಿಸಬೇಕಾದ ಅಂಶ ಅಂದರೆ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ (Chamarajanagar) ಕಡೆಗೆ ಎಸ್ಕೇಪ್ (Escape) ಆಗಿದ್ದ ಎಂದು ತಿಳಿದುಬಂದಿದೆ.
ಪೊಲೀಸರು ಕಿರಣ್ ಮೇಲೆ ಹೆಚ್ಚು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಈತನ್ನು ಬಂಧಿಸುವ ಸಾಧ್ಯತೆಗಳಿದ್ದು, ಒಂದು ವೇಳೆ ಅರೆಸ್ಟ್ (Arrest) ಮಾಡಿದರೆ ಮೊದಲು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆ ಮಾಡಬೇಕಿದೆ ಎಂದು ಕಸ್ಟಡಿಗೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.
ಶನಿವಾರ ಸಂಜೆ 7.30ರ ಸುಮಾರಿಗೆ ಸುಬ್ರಹ್ಮಣ್ಯಪುರ (Subrahmanyapura) ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನ (Apartment) ಮನೆಗೆ ನುಗ್ಗಿ ಗಣಿ ಭೂವಿಜ್ಙಾನ ಇಲಾಖೆ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಅವರನ್ನು ಕೊಲೆ ಮಾಡಲಾಗಿತ್ತು. ಹಗ್ಗದಿಂದ ಕುತ್ತಿಗೆಗೆ ಬಿಗಿದು ಬಳಿಕ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ್ದು, ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈಗಾಗಲೇ ಪತ್ತೆಗೆ ಮೂರು ವಿಶೇಷ ತಂಡಗಳನ್ನು ಆರೋಪಿಗಳಿಗಾಗಿ ರಚನೆ ಮಾಡಲಾಗಿದ್ದು, ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ( ಆರ್ಥಿಕ ) ಜೀವನ ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ.
ಭವ್ಯಶ್ರೀ ಆರ್.ಜೆ