ದೇಶದ 13 ಕಡೆಗಳಿಗೆ ಕೋವಿಶೀಲ್ಡ್ ಲಸಿಕೆ ಪೂರೈಕೆ

ಬೆಂಗಳೂರು, ಜ. 12: ದೇಶದಲ್ಲಿ ಕೊರೊನಾ ಆತಂಕ ಇನ್ನೂ ಜೀವಂತವಾಗಿರುವ ಬೆನ್ನಲ್ಲೇ ಮಹಾಮಾರಿ ವಿರುದ್ದದ ಭಾರತದ ನಿರ್ಣಾಯಕ ಹೋರಾಟ ಆರಂಭವಾಗಿದ್ದು ಕೋವಿಶೀಲ್ಡ್ ಲಸಿಕೆ ಹೊತ್ತ ಮೂರು ಟ್ರಕ್ ದೇಶದ 13 ಕಡೆಗಳಿಗೆ ಪುಣೆ ವಿಮಾನ ನಿಲ್ದಾಣದಿಂದ ಮಂಗಳವಾರ ಪೂರೈಕೆಯಾಗುತ್ತಿದೆ.

ದೇಶದೆಲ್ಲೆಡೆ ಜನವರಿ 16ರಂದು ಲಸಿಕೆ ಅಭಿಯಾನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಮಂಗಳವಾರ ಕೋವಿಶೀಲ್ಡ್ ದೇಶದ ವಿವಿಧ ಭಾಗಗಳಿಗೆ ತಲುಪಲಿದೆ. ತೀವ್ರ ಭದ್ರತೆಯೊಂದಿಗೆ ಲಸಿಕೆಯನ್ನು ಮೂರು ಟ್ರಕ್‌ಗಳಲ್ಲಿ ದೇಶದ ವಿವಿಧ ಕಡೆಗಳಿಗೆ ರವಾನಿಸಲಾಗುತ್ತಿದೆ. ಪ್ರಮುಖವಾಗಿ ಬೆಂಗಳೂರು, ದೆಹಲಿ, ಕರ್ನಲ್, ಅಹಮದಾಬಾದ್, ವಿಜಯವಾಡ, ಭುವನೇಶ್ವರ, ಕೋಲ್ಕತ್ತಾ, ಗುವಾಹಟಿ, ಚೆನ್ನೈ, ಹೈದರಾಬಾದ್, ಚಂಡೀಗಢ ಮತ್ತು ಲಕ್ನೊಗೆ ತಲುಪಲಿದೆ.

ಕೋವಿಶೀಲ್ಡ್ ಲಸಿಕೆಯನ್ನು ಪುಣೆಯಿಂದ ವಿವಿಧ ವಿಮಾನ ನಿಲ್ದಾಣಗಳಿಗೆ ತಲುಪಿಸುವ ಹೊಣೆ ಹೊತ್ತಿರುವ ಎಸ್ ಬಿ ಲಾಜಿಸ್ಟಿಕ್ಸ್ ತಂಡದ ಸಂದೀಪ್ ಬೊಸಲೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ”ಲಸಿಕೆಯನ್ನು ಹೊತ್ತ ಮೊದಲ ವಿಮಾನ ಪುಣೆ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಲಿದೆ. 8 ವಿಮಾನಗಳು, ಎರಡು ಕಾರ್ಗೊ ವಿಮಾನಗಳು ಮತ್ತು ಇತರ ನಿತ್ಯದ ವಾಣಿಜ್ಯ ವಿಮಾನಗಳು ಲಸಿಕೆಯನ್ನು ರವಾನಿಸಲಿದ್ದು ಎಲ್ಲಾ ಲಸಿಕೆಗಳು ಮುಂಜಾನೆ ವಿತರಣೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ನಡುವೆ ಪುಣೆಯಿಂದ ಹೊರಟಿರುವ ಮೊದಲ ಕಂತಿನ 7.95 ಲಕ್ಷ ಲಸಿಕೆ ಸಂಗ್ರಹ ಇಂದು 11:30ಕ್ಕೆ ಬೆಂಗಳೂರು ತಲುಪಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.