ದೇಶದ ಅತಿ ಕಿರಿಯ ಮೇಯರ್ ಆರ್ಯ ರಾಜೇಂದ್ರನ್

ತಿರುವನಂತಪುರಂ, ಡಿ. 25: ಪ್ರಸ್ತುತ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಉನ್ನತ ಸ್ಥಾನಗಳನ್ನು ಸರ್ವೇಸಾಮಾನ್ಯವಾಗಿ ಹೋಗಿದೆ. ಕೇರಳ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್ ಆಗಿ 21 ವರ್ಷದ ಆರ್ಯ ರಾಜೇಂದ್ರನ್ ಆಯ್ಕೆಯಾಗಿದ್ದಾರೆ. ಈ ಮೂಲಕ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆ ನಡೆದ ಸಿಪಿಎಂ ಪಕ್ಷದಿಂದ ಆರ್ಯ ರಾಜೇಂದ್ರನ್ ಸ್ಪರ್ಧಿಸಿದ್ದರು. ಇವರು ಎಲ್‍ಬಿಎಸ್ ಎಂಜಿನಿಯರಿಂಗ್ ಕಾಲೇಜ್‍ನಲ್ಲಿ ವಿದ್ಯಾರ್ಥಿಯಾಗಿರುವ ಆರ್ಯ ರಾಜೇಂದ್ರನ್ ಸ್ಟೂಡೆಂಟ್ ಫೆಡರೇಶನ್ ಆಫ‍್ ಇಂಡಿಯಾದ ರಾಜ್ಯ ಸಮಿತಿ ಸದಸ್ಯೆಯಾಗಿದ್ದಾರೆ. ಇವರ ತಂದೆ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ.

Exit mobile version