vijaya times advertisements
Visit Channel

ಕಾನ್ ಚಿತ್ರೋತ್ಸವದಲ್ಲಿ ‘ದೇವರ ಕನಸು‘

41793a94-13a0-4a91-8e35-f6d1ed8eee0f

ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ದೇಶಕ ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ತಯಾರಾದ ದೇವರ ಕನಸು ಸಿನಿಮಾ ಪ್ರತಿಷ್ಠಿತ 74ನೇ ಕಾನ್ ಸಿನಿಮೋತ್ಸದ ವೇಳೆ ಅದರ ಮಾರುಕಟ್ಟೆ ವಿಭಾಗ, ಮಾರ್ಷ್ ಡು ಫಿಲಂನಲ್ಲಿ ಪ್ರದರ್ಶನ ಕಂಡಿದೆ. ಸಾಮಾಜಿಕ ಸಂದೇಶ ಸಾರುವ ಈ ಸಿನಿಮಾದಲ್ಲಿ 12 ವರ್ಷದ ಬಾಲಕನ ಸೈಕಲ್ ಪಡೆದುಕೊಳ್ಳುವ ಕನಸಿನ ಸುತ್ತ ನಿರ್ದೇಶಕರು ಕಥೆ ಹೆಣೆದಿದ್ದಾರೆ.

ಸ್ವಂತ ಸೈಕಲ್ ಖರೀದಿಸಿ ಊರ ಸೈಕಲ್ ರೇಸ್ ನಲ್ಲಿ ಗೆಲುವು ಸಾಧಿಸುವುದು ಆತನ ಮುಖ್ಯ ಉದ್ದೇಶ. ಅದನ್ನು ಈಡೇರಿಸಿಕೊಳ್ಳಲು ಬಾಲಕ ಏನೆಲ್ಲ ಹರಸಾಹಸ ಮಾಡುತ್ತಾನೆ ಎನ್ನುವುದೇ ‘ದೇವರ ಕನಸು’ ಚಿತ್ರದ ಎಳೆ.
ಈ ಸಿನಿಮೋತ್ಸವದ ಮಾರುಕಟ್ಟೆ ವಿಭಾಗದಲ್ಲಿ ಚಿತ್ರತಂಡ ಪಾಲ್ಗೊಳ್ಳಲು ಅವಕಾಶ ಇತ್ತಾದರೂ, ಕೋವಿಡ್ ಪ್ಯಾಂಡಮಿಕ್ ಹಿನ್ನೆಲೆಯಲ್ಲಿ ಅದು ಈಡೇರಿರಲಿಲ್ಲ. ಮಾರುಕಟ್ಟೆ ವಿಭಾಗದ ಚಿತ್ರಗಳು ಆನ್ಲೈನ್ ಮೂಲಕ ಪ್ರದರ್ಶನ ಕಾಣುತ್ತಿವೆ. 2019ರಲ್ಲಿ ಶೂಟಿಂಗ್ ಆರಂಭಿಸಿದ್ದ ಈ ಸಿನಿಮಾ, ಒಟ್ಟು 29 ದಿನಗಳಲ್ಲಿ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು, ಇದೀಗ ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಪದಾರ್ಪಣೆ ಮಾಡಿತ್ತು.
ಇನ್ನು ಈ ಸಿನಿಮಾದ ಮತ್ತೊಂದು ವಿಶೇಷ ಏನೆಂದರೆ, ದೇವರ ಕನಸು ಚಿತ್ರಕ್ಕೆ ಪ್ಯಾನ್ ಇಂಡಿಯಾ ತಂತ್ರಜ್ಞರು ಕೆಲಸ ಮಾಡಿರುವುದು. ರತ್ನಜಿತ್ ರಾಯ್ ಛಾಯಾಗ್ರಹಣ, ಅನಿರ್ಬನ್ ಗಂಗೂಲಿ ಸೌಂಡ್ ಡಿಸೈನಿಂಗ್, ಸಂಕಲನ ಜಿಸ್ನು ಸೇನ್ ಇವರೆಲ್ಲ ಪಶ್ಚಿಮ ಬಂಗಾಳದವರು. ಅದೇ ರೀತಿ ಚೆನ್ನೈ ಮೂಲದ ನಿತ್ಯಾನಂದ ಸೌಂಡ್, ಸುಂದರ್ ಆರ್ ಅವರ ಸಂಗೀತ ನೀಡಿದ್ದಾರೆ. ಕೇರಳ ಮೂಲದ ಜಿಷಾ ಮ್ಯಾಥ್ಯು ವಸ್ತ್ರ ವಿನ್ಯಾಸ ಮಾಡಿದ್ದು, ಮತ್ತೋರ್ವ ಮನೋಜ್ ಅಂಗಮಾಲಿ ಮೇಕಪ್ ಜವಾಬ್ದಾರಿ ನಿಭಾಯಿಸಿದ್ದಾರೆ. ಕರ್ನಾಟಕದ ಲಿಂಗರಾಜ್ ಇತಿಹಾಸ್ ಸಂಭಾಷಣೆ ಮತ್ತು ಸಾಹಿತ್ಯ ಬರೆದರೆ, ಚನ್ನಬಸವ ಪ್ರೊಡಕ್ಷನ್ ಡಿಸೈನರ್ ಆಗಿ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಈ ಸಿನಿಮಾಕ್ಕೆ ಸುನೀಲ್ ರಾಮ್ ಕಥೆ ಬರೆದಿದ್ದಾರೆ.

ನಿರ್ದೇಶಕ ಸುರೇಶ್ ಲಕ್ಕೂರ್ ನ್ಯೂಯಾರ್ಕ್ ಸಿನಿಮಾ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದಾರೆ. ಮೊದಲ ಚಿತ್ರವಾಗಿ ದೇವರ ಕನಸು ಅವರ ಬತ್ತಳಿಕೆಯಿಂದ ಹೊರಬಂದಿದ್ದು, ಮಕ್ಕಳ ಸಿನಿಮಾ ಮೂಲಕ ಆಗಮಿಸಿದ್ದಾರೆ. ಚಿಂತಾಮಣಿಯ ಬಳಿಯ ಹಿರೇಪಳ್ಳಿ. ಕನಂಪಲ್ಲಿ, ಕೈವಾರ ಸುತ್ತಮುತ್ತ ಚಿತ್ರದ ಚಿತ್ರೀಕರಣವಾಗಿದೆ. ಈ ಮೊದಲು ಕನ್ನಡದ ದೃಶ್ಯ ಸಿನಿಮಾದಲ್ಲಿ ಕೆಲಸ ಮಾಡಿದ್ದು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ.

ಚಿತ್ರದಲ್ಲಿ ದೀಪಕ್, ಅಮೂಲ್ಯ, ಯುವರಾಜ್ ಕಿಣಿ, ಆರುಷಿ ವೇದಿಕಾ, ಮಣಿ, ರೂಪಾ, ವಿಜಯ್ ರಾಕೇಶ್ ಮೊದಲಾದವರು ಪಾತ್ರವರ್ಗದಲ್ಲಿದಲ್ಲಿದ್ದಾರೆ. ಈ ಮಕ್ಕಳ ಚಿತ್ರಕ್ಕೆ ಉದ್ಯಮಿಗಳಾದ ಸಿ. ಜಯಕುಮಾರ್, ಸಿ ಶೇಖರ್ ಬಂಡವಾಳ ಹೂಡಿದ್ದಾರೆ. ಗಂಗಾಧರ್, ಶಂಕರ್, ಸಿ ಸುಬ್ಬಯ್ಯ ಸಹನಿರ್ಮಾಪಕರಾಗಿದ್ದಾರೆ.

Latest News

ರಾಜ್ಯ

ವಯಸ್ಸು ನೂರು ದಾಟಿದರೂ ಈ ಸಿದ್ದಪ್ಪಜ್ಜ ಈಗಲೂ ನಡೆಸುತ್ತಾರೆ ಪ್ರಾವಿಜನ್‌ ಸ್ಟೋರ್‌!

ಹೊಸ ಚಿಂತನೆಯ ಹಾದಿಗೆ ಹಂಬಲಿಸುತ್ತಿರುತ್ತಾರೆ. ಹೀಗೆ, ಬಿಪಿ ಶುಗರ್(BP) ಯಾವುದೇ ಸಮಸ್ಯೆಯಿಲ್ಲದೇ ಯಶಸ್ವಿಯಾಗಿ 103 ವರ್ಷ ಪೂರೈಸಿರುವ ಹಿರಿಯರೊಬ್ಬರ ಕಥೆ ಇಲ್ಲಿದೆ.

ರಾಜಕೀಯ

ಗೋ ಹತ್ಯಾ ನಿಷೇಧ ವಿಧೇಯಕದಿಂದ ಕರ್ನಾಟಕ್ಕೆ ಎಷ್ಟು ಲಾಭವಾಯಿತು? : ಪ್ರಿಯಾಂಕ್‌ ಖರ್ಗೆ

ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಗೋವುಗಳ ನಿರ್ವಹಣೆ ವೆಚ್ಚ ಭರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು.

ದೇಶ-ವಿದೇಶ

PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಇನ್ನು ಯುಎಪಿಎ ಕಾಯ್ದೆಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು 5 ವರ್ಷದ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ರಾಜಕೀಯ

ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ ಪ್ರಧಾನಿ ಮೋದಿ ಅವರೇ? : ಸಿದ್ದರಾಮಯ್ಯ

ಪ್ರಧಾನಿ ಮೋದಿ(Narendra Modi) ಅವರಿಗೆ ಬಡ ಮಕ್ಕಳ ವಿದ್ಯಾರ್ಥಿ ವೇತನ ಹೊರೆಯಾಗಿಬಿಟ್ಟಿತೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ವಾಗ್ದಾಳಿ ನಡೆಸಿದ್ದಾರೆ.