• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ:ನಾಳೆ ಪ್ರಮಾಣ ವಚನ ಸ್ವೀಕಾರ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ:ನಾಳೆ ಪ್ರಮಾಣ ವಚನ ಸ್ವೀಕಾರ
0
SHARES
25
VIEWS
Share on FacebookShare on Twitter

Mumbai : ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ (Maharashtra government) ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ (Mumbai) ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ. ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಏಕನಾಥ್ ಶಿಂಧೆ, ಅಜಿತ್ ಪವಾರ್ (Eknath Shinde, Ajit Pawar) ಸಹ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. ‘ಮಹಾಯತಿ’ ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ.

ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ (BJP Legislature) ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು (Finance) ಸಚಿವೆ ನಿರ್ಮಲಾ ಸೀತಾರಾಮನ್‌, ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ (Former CM Vijay Rupani) ಸಮ್ಮುಖದಲ್ಲಿ ಬಿಜೆಎಲ್‌ಪಿ (BJP) ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ (Maharashtra Legislative Assembly) ನವೆಂಬರ್ 20ರಂದು ಮತದಾನ ನಡೆದಿತ್ತು. ಚುನಾವಣೆಯಲ್ಲಿ ‘ಮಹಾಯತಿ’ ಮೈತ್ರಿಕೂಟ 230 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತವನ್ನು ಪಡೆದಿದ್ದು, ಹೊಸ ಸರ್ಕಾರವನ್ನು (New government) ರಚನೆ ಮಾಡಲಿದೆ. ಚುನಾವಣೆಯಲ್ಲಿ 132 ಸೀಟುಗಳನ್ನು ಗೆದ್ದಿರುವ ಬಿಜೆಪಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ. ಮೈತ್ರಿಕೂಟದಲ್ಲಿರುವ (Alliance) ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ.

ಡಿಸೆಂಬರ್ 5 ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ (Swearing in program of Govt) ಮುಂಬಯಿನ ಆಜಾದ್‌ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 2 ಸಾವಿರ ಗಣ್ಯರು, 40 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Tags: Ajit Pawarbjpdevendra fadnavisEknath Shindemaharasgtra assembly electionspoliticalpolitics

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.