ಸರ್ಕಾರದ ವಿರುದ್ಧ ನಟ ಧೃವ ಸರ್ಜಾ ಕಿಡಿ: ‘ಆ್ಯಕ್ಷನ್ ಪ್ರಿನ್ಸ್’ಗೆ ಸ್ಯಾಂಡಲ್‌ವುಡ್‌ ಸಾಥ್

ಬೆಂಗಳೂರು, ಫೆ. 03: ರಾಜ್ಯದಲ್ಲಿ ಕೊರೊನಾ ಆತಂಕ ದೂರಾಗಿದ್ದು, ಎಲ್ಲಾ ಚಟುವಟಿಕೆಗಳು ಎಂದಿನಂತೆ ನಡೆಯುತ್ತಿದೆ.‌ ಈ ನಡುವೆ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ರಾಜ್ಯ ಸರ್ಕಾರ ಆದೇಶ ನೀಡಿರುವ ಬಗ್ಗೆ ಸ್ಯಾಂಡಲ್ವುಡ್ ನಟರು ಹಾಗೂ ನಿರ್ದೇಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಮಾರ್ಕೆಟ್‍ನಲ್ಲಿ ಗಿಜಿ ಗಿಜಿ ಜನ ಸೇರುತ್ತಾರೆ. ಬಸ್ಸಿನಲ್ಲೂ ಫುಲ್ ರಶ್ ಇರುತ್ತೆ. ಆದರೆ ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಟ್ವೀಟ್ ಅನ್ನು ಸಿಎಂ, ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಸುಧಾಕರ್‍ಗೆ ಟ್ಯಾಗ್ ಮಾಡಿದ್ದಾರೆ.

ನಟ ಧ್ರುವ ಸರ್ಜಾ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕನ್ನಡ ಚಿತ್ರರಂಗದ ‌ಹಲವು ನಟರು, ನಿರ್ದೇಶಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರ ಕೂಡಲೇ ಈ ಬಗ್ಗೆ ಗಮನವಹಿಸಿ ಶೇ.100 ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

Exit mobile version