ಡಿ.31ರವರೆಗೆ ಭಾರತಕ್ಕೆ ವಿದೇಶಿ ವಿಮಾನಗಳ ಹಾರಾಟ ರದ್ದು

ನವದೆಹಲಿ, ಡಿ. 21: ಕೊರೊನಾ ಲಾಕ್ ಡೌನ್ ನಂತರ ವಿಮಾನ ಹಾರಾಟ ಆರಂಭವಾಗಿದೆ. ಆದರಿದೀಗ ಪುನಃ ಲಂಡನ್‍ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಡಿಸೆಂಬರ್ 22ರಿಂದ 31ರ ವರೆಗೆ ರದ್ದು ಮಾಡಬೇಕೆಂದು ಆದೇಶ ಹೊರಡಿಸಿದೆ.

ಅಲ್ಲದೇ ಅಮೆರಿಕಾದಿಂದ ಭಾರತಕ್ಕೆ ಬರುವ ವಿಮಾನಗಳ ಹಾರಾಟವನ್ನು ಕೂಡ ಡಿಸೆಂಬರ್‌ 22 ರಿಂದ 31ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಹಾಗೂ ಅಮೇರಿಕದಲ್ಲಿ ಕೊರೊನಾ ವೈರಸ್‍ನ ಹೊಸ ರೂಪವನ್ನು ಕಂಡು ಹಿಡಿಯಲಾಗಿದೆ, ಆದ್ದರಿಂದ ಆತಂಕಪಡುವ ಅಗತ್ಯವಿಲ್ಲವೆಂದು ಹರ್ಷವರ್ಧನ್ ತಿಳಿಸಿದ್ದಾರೆ. ಇದರಿಂದ ಅಮೇರಿಕದಲ್ಲಿ ಕಾಣಿಸಿಕೊಂಡಿರುವ ಹೊಸ ವೈರಸ್‍ನ ಕುರಿತು ಕೇಂದ್ರ ಸರ್ಕಾರವು ಸಹ ಕಟ್ಟೆಚ್ಚರ ವಹಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸೋಮವಾರ ತಿಳಿಸಿದ್ದಾರೆ.

Exit mobile version