ಡಿ.4ರಂದು ಸರ್ವಪಕ್ಷಗಳ ಸಭೆ ನಡೆಸಲಿರುವ ಪ್ರಧಾನಿ ಮೋದಿ

ಹೊಸದಿಲ್ಲಿ, ನ. 30: ದೇಶದಲ್ಲಿ ಕೊರೊನಾ ಪರಿಸ್ಥಿತಿ ಕುರಿತಂತೆ ಚರ್ಚಿಸುವ ಸಲುವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಡಿಸೆಂಬರ್ 4ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ ಕೊರೊನಾ ಪರಿಸ್ಥಿತಿ ನಿರ್ಮಾಣವಾದ ನಂತರದಲ್ಲಿ ಕೇಂದ್ರ ಸರ್ಕಾರ ಕರೆಯುತ್ತಿರುವ 2ನೇ ಸರ್ವಪಕ್ಷ ಸಭೆ ಇದಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ದಿನದಿಂದ ಈವರೆಗೂ ಒಟ್ಟು 94 ಲಕ್ಷ ಮಂದಿ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಕೊರೊನಾ ಪರಿಸ್ಥಿತಿ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ.
ಅಂದಿನ ಸಭೆಯಲ್ಲಿ ರಕ್ಷಣ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸುವ ಸಾಧ್ಯತೆ ಇದೆ.

Exit mobile version