ಸರ್ಜಿಕಲ್ ಸ್ಟ್ರೈಕ್ ಮತ್ತು ಪುಲ್ವಾಮಾ ಭಯೋತ್ಪಾದನಾ ದಾಳಿಗಳ ಪುರಾವೆ ತೋರಿಸುವ ಅಗತ್ಯವಿಲ್ಲ : ರಾಹುಲ್‌ ಗಾಂಧಿ

Jammu Kashmir : ‘ಸರ್ಜಿಕಲ್ ಸ್ಟ್ರೈಕ್’ ಮತ್ತು ಪುಲ್ವಾಮಾ ಭಯೋತ್ಪಾದನಾ ದಾಳಿಯ ಕುರಿತು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್(digvijay singh statement clarity) ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರು ಅಂತರ ಕಾಯ್ದುಕೊಂಡಿದ್ದಾರೆ.

“ದಿಗ್ವಿಜಯ ಸಿಂಗ್‌ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದಕ್ಕೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಅವರು, “ನಾವು ನಮ್ಮ ಸಶಸ್ತ್ರ ಪಡೆಗಳನ್ನು ನಂಬುತ್ತೇವೆ ಮತ್ತು ಅವರು ತಮ್ಮ ಕೆಲಸವನ್ನು ಅಸಾಧಾರಣವಾಗಿ ಮಾಡುತ್ತಿದ್ದಾರೆ.

ಸರ್ಜಿಕಲ್ ಸ್ಟ್ರೈಕ್‌ಗಳ(Surgical strike) ಬಗ್ಗೆ ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ಸರ್ಜಿಕಲ್ ಸ್ಟ್ರೈಕ್ ಮತ್ತು 2019 ರ ಪುಲ್ವಾಮಾ ಭಯೋತ್ಪಾದನಾ ದಾಳಿಯ(Pulwama terror Attack) ಕುರಿತು ಯಾವುದೇ ಪುರಾವೆ ನೀಡುವ ಅಗತ್ಯವಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ(Mallikarjun Kharge) ಅವರು ಕೂಡಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದು,

“ನಾವು ಯಾವಾಗಲೂ ದೇಶಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಅದೇ ರೀತಿ ಮಾಡುತ್ತೇವೆ. ನಮ್ಮ ಸೇನೆಯ ಬಗ್ಗೆ ನಮಗೆ ಅಪಾರ ಗೌರವವಿದೆ. ಸೇನೆಯೊಂದಿಗೆ ಕಾಂಗ್ರೆಸ್‌ ಪಕ್ಷ ಸದಾ ನಿಲ್ಲಲಿದೆ” ಎಂದು ಹೇಳಿದ್ದಾರೆ.

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಯೋತ್ಪಾದಕ ಗುಂಪುಗಳ ವಿರುದ್ಧ ನರೇಂದ್ರ ಮೋದಿ(Narendra Modi) ಸರ್ಕಾರ ನಡೆಸುತ್ತಿರುವ ‘ಸರ್ಜಿಕಲ್ ಸ್ಟ್ರೈಕ್’ಗಳನ್ನು ದಿಗ್ವಿಜಯ ಸಿಂಗ್ ಪ್ರಶ್ನಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ(Jammu and Kashmir) ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ,

“ಮೋದಿ ಸರ್ಕಾರವು ಸುಳ್ಳುಗಳನ್ನು ಹೇಳುತ್ತಿದೆ. ಮೋದಿ ಅವರು ಸರ್ಜಿಕಲ್ ಸ್ಟ್ರೈಕ್‌ಗಳ (digvijay singh statement clarity) ಬಗ್ಗೆ ಮಾತನಾಡುತ್ತಾರೆ. ಅನೇಕ ಜನರನ್ನು ಕೊಂದಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ.

ಆದರೆ ಯಾವುದೇ ಪುರಾವೆಯನ್ನು ನೀಡಲಾಗಿಲ್ಲ. ಅವರು ಸುಳ್ಳಿನ ಕಂತೆ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದರು. ದಿಗ್ವಿಜಯ ಸಿಂಗ್‌ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಮಹಿಳೆಯ ಜೊತೆ ಪ್ರಯಾಣಿಕನ ಅಶಿಸ್ತಿನ ನಡೆ : ವರದಿ ಮಾಡದ ಏರ್ ಇಂಡಿಯಾಗೆ ಬಿತ್ತು 10ಲಕ್ಷ ದಂಡ

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ(BJP) “ಮತ್ತೊಮ್ಮೆ ಕಾಂಗ್ರೆಸ್ ‘ಸರ್ಜಿಕಲ್ ಸ್ಟ್ರೈಕ್’ ಅನ್ನು ಪ್ರಶ್ನಿಸುತ್ತಿದೆ. ಪುಲ್ವಾಮಾದಲ್ಲಿ ಪಾಕ್(Pakistan) ನಿರೂಪಣೆಯನ್ನು ಕಾಂಗ್ರೆಸ್‌ ಪ್ರತಿಧ್ವನಿಸುತ್ತದೆ.

ಕಾಂಗ್ರೆಸ್‌ ಪಕ್ಷವು ಭಾರತೀಯ ಸೇನೆಯನ್ನು ಅವಮಾನಿಸಿದೆ. ಇದಕ್ಕೆ ತಕ್ಕ ಪಾಠವನ್ನು ಜನರು ಕಲಿಸುತ್ತಾರೆ” ಎಂದು ಹೇಳಿತ್ತು.

ಇನ್ನು ಕಾಂಗ್ರೆಸ್‌ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ “ಭಾರತ್‌ಜೋಡೋ”(Bharath jodo) ಯಾತ್ರೆ ಇದೀಗ ಅಂತಿಮ ಹಂತದಲ್ಲಿದ್ದು, ಜಮ್ಮುಕಾಶ್ಮೀರದಲ್ಲಿ ಸಾಗುತ್ತಿದೆ. ಹೀಗಾಗಿ ಕಾಶ್ಮೀರದ ಕುರಿತು ಬಿಜೆಪಿ-ಕಾಂಗ್ರೆಸ್‌ನಡುವೆ ವಾಕ್‌ಸಮರ ಜೋರಾಗಿದೆ.

Exit mobile version