- ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ, ಅಂಗಾಂಗ ಕಸಿ ಆರೋಗ್ಯ ಸೇವೆಗಳ ಹೆಚ್ಚಳ
- ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯು ಕೇಂದ್ರಗಳನ್ನು ಪ್ರಾರಂಭಿಸಲು ಸೂಚನೆ
- ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಲು ಪ್ಲಾನ್
Bengaluru: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ (Organ donation) ಮತ್ತು ಅಂಗಾಂಗ ಕಸಿ (Organ transplant) ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ (Review meeting) ನಡೆಸಿದ ಸಚಿವರು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯು ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ (Notice to authorities) ನೀಡಿದ್ದಾರೆ.
ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು (Minister to officials) ಸೂಚನೆ ನೀಡಿದರು. ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ (Government District Hospital) ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು.

ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಸಚಿವರು, ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ ಅಪಘಾತಗಳು (Accidents in the state) , ಅಂಗಾಂಗ ನಿಷ್ಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು ಅಂಗಾಂಗ ದಾನ ಮತ್ತು ಕಸಿ (Donation and transplantation) ಪ್ರಯತ್ನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ನಿರ್ಧಾರಗಳನ್ನು ಸಚಿವರ ನೇತೃತ್ವದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.
ಇದನ್ನು ಓದಿ : http://ಕಾಶ್ಮೀರದ ಸೇಬಿಗೆ ಬಳಸುವ ಕೀಟನಾಶಕಗಳಿಂದ ಮೆದುಳು ಕ್ಯಾನ್ಸರ್ ಹೆಚ್ಚಳ
ಜೀವಸಾರ್ಥಕತೆ ಸೊಸೈಟಿಯ (Society) ನೋಂದಣಿಯನ್ನು ನವೀಕರಿಸಲಾಗುವುದು ಮತ್ತು ಕಾರ್ಯಾಚರಣಾ (Dinesh Gundu Rao instructs) ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ (Five to seven) ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.