Chemotherapy day care center in every district of Karnataka: Minister Dinesh Gundu Rao announced
Bengaluru : ಬದಲಾದ ಜೀವನಶೈಲಿಯಿಂದ ಹಲವಾರು ಮಂದಿ ಕ್ಯಾನ್ಸರ್ (Cancer) ರೋಗಕ್ಕೆ ತುತ್ತಾಗುತ್ತಿರುವ ಕಾರಣದಿಂದಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ಗಳನ್ನ ಮುಂದಿನ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಕೆ.ಸಿ ಜನರಲ್ ಆಸ್ಪತ್ರೆಯ (K C General Hospital) ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಕೆ.ಸಿ ಜನರಲ್ ಆಸ್ಪತ್ರೆಯನ್ನ ಮೇಲ್ದರ್ಜೆಗೇರಿಸಲು ಎಂ.ಸಿ.ಎಚ್ ಆಸ್ಪತ್ರೆ, ಭೋದಕ ಕೊಠಡಿ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 150 ಕೋಟಿಯ ಅನುದಾನವನ್ನ ಕೇಳಿದ್ದೆವು.
ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನಮ್ಮ ಮನವಿಗೆ ಸ್ಪಂದಿಸಿ, ಅತಿ ಕಡಿಮೆ ಅವಧಿಯಲ್ಲೇ ಅನುದಾನ ಮಂಜೂರು ಮಾಡಿಕೊಟ್ಟಿದ್ದಾರೆ. ಭೂಮಿ ಪೂಜೆ ಕೂಡಾ ನೆರವೇರಿಸಲಾಗಿದೆ. ಇದರ ಸಂಪೂರ್ಣ ಸದುಪಯೋಗ ನಮ್ಮ ಜನಸಾಮಾನ್ಯರಿಗೆ ದೊರೆಯಲಿದೆ ಎಂದಿದ್ದಾರೆ. ಆರೋಗ್ಯ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಕ್ರಮವಹಿಸಲಾಗಿದೆ. ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಪ್ರದೇಶದ ಸೂಪರ್ ಸ್ಪೆಷಾಲಿಟಿ (Super Specialty) ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ.
ಕಿಮೋ ಥೆರಪಿಗೆ (Chemo Therapy) ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗಳಿಗೆ ತೆರಳಿ ಹೆಚ್ಚಿನ ಹಣ ಖರ್ಚು ಮಾಡುವುದನ್ನು ತಪ್ಪಿಸಲು ಮುಂದಿನ ತಿಂಗಳಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದಿದ್ದಾರೆ.
ಇನ್ನು ಮುಂದೆ ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆಗಾಗಿ ಪ್ರತ್ಯೇಕ ಅಂಬ್ಯುಲೆನ್ಸ್ (Ambulance) ಸೇವೆ ಶೀಘ್ರದಲ್ಲಿಯೇ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 65 ನೂತನ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆಯನ್ನ ಅಪಘಾತಕ್ಕಿಡಾದವರ ನೆರವಿಗಾಗಿಯೇ ಒದಗಿಸಲಾಗುತ್ತಿದೆ. ಇದು ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂಬ್ಯುಲೆನ್ಸ್ ಗಳಿಗೆ ಕೂಡ ಚಾಲನೆ ನೀಡಲಿದ್ದಾರೆ ಎಂದಿದ್ದಾರೆ .
Dinesh Gundu Rao latest news Kannada Post
Bengaluru: Health Minister Dinesh Gundurao has said that Chemotherapy Day Care Centers will be started in all district hospitals of the state within the next month as many people are getting cancer due to changed lifestyle.
He participated in the Bhoomi Puja program for the construction of the Mother and Child Hospital building in the premises of KC General Hospital in Bangalore on Tuesday. We have asked for a grant of 150 crores for various development works including MCH Hospital, Bhodaka Koum, to upgrade the C General Hospital. CM Siddaramaiah responded to our request and sanctioned the grant within a very short period of time. Bhoomi Puja is also performed. He said that the full benefit of this will be available to our common people.
Actions have been taken for the comprehensive improvement of the health system. Cancer patients today come to super specialty hospitals in remote urban areas for chemotherapy. He said that chemotherapy day care centers will be started in district hospitals from next month to avoid going to big hospitals and spending a lot of money for chemo therapy.
Health Minister Dinesh Gundurao said that a separate ambulance service will be started soon for emergency health care for those who face accidents. 65 new separate ambulance services are being provided for the assistance of the accident victims. This is a new scheme of the state government, CM Siddaramaiah has said that ambulances will also be launched soon.