ಬಿಜೆಪಿ ಜೊತೆಗಿನ ಮೈತ್ರಿಯಿಂದ ಕರ್ನಾಟಕದಲ್ಲಿ ಜೆಡಿಎಸ್‌ ಭವಿಷ್ಯ ಅಂತ್ಯ: ದಿನೇಶ್‌ ಗುಂಡೂರಾವ್‌

Bengaluru: ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮುಂದಿನ ಲೋಕಸಭಾ (Dineshgundu rao slams JDS) ಚುನಾವಣೆಗೆ ಮೈತ್ರಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಆರೋಗ್ಯ

ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದು, ಈ ಮೈತ್ರಿಯಿಂದ ಕರ್ನಾಟಕದಲ್ಲಿ ಜೆಡಿಎಸ್‌ ಅಂತ್ಯವಾಗಲಿದೆ. ಈ ಹಿಂದೆಯೂ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಅದಕ್ಕೆ ಜಾತ್ಯಾತೀತ

ರಾಜಕೀಯದ ಬಗ್ಗೆ ನಿಜವಾಗಲೂ ನಂಬಿಕೆಯಿಲ್ಲ ಎಂದು (Dineshgundu rao slams JDS) ಕಿಡಿಕಾರಿದರು.

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಇದರಿಂದ ಕರ್ನಾಟಕದಲ್ಲಿ (Karnataka) ಜೆಡಿಎಸ್‌ನ ಅಂತ್ಯವಾಗಲಿದೆ ಎಂದು ಆರೋಗ್ಯ ಸಚಿವ(Health Minister)

ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿಯೇತರ

ಪಕ್ಷಗಳ ಸಭೆಯಲ್ಲಿ ಮಾತನಾಡಿರುವ ಸಚಿವರು ಜೆಡಿಎಸ್‌ ವಿರುದ್ಧ ಕೆಂಡಕಾರಿದ್ದಾರೆ.

ಜೆಡಿಎಸ್‌ಗೆ ಜಾತ್ಯಾತೀತ ತತ್ವದ ಬಗ್ಗೆ ನಿಜವಾಗಲೂ ನಂಬಿಕೆಯಿಲ್ಲ ಎಂಬುದು ನಮಗೆ ಗೊತ್ತಿದೆ. ಜೆಡಿಎಸ್‌ ಈ ಹಿಂದೆಯೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಅದರಲ್ಲೇನು ಹೊಸತಿಲ್ಲ ಎಂದರು.

ಜನತಾದಳಕ್ಕೆ ಇರುವ ಜಾತ್ಯಾತೀತ ಟ್ಯಾಗ್‌ ಅನ್ನು ತೆಗೆದುಹಾಕಬೇಕು. ಅಧಿಕಾರಕ್ಕೋಸ್ಕರ ನಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಒಪ್ಪಿಕೊಳ್ಳಲಿ ಮತ್ತು ಅವರಿಗೆ ಯಾವುದೇ

ಸಿದ್ಧಾಂತ, ತತ್ವಗಳಿಲ್ಲ ಎಂದು ವಾಗ್ದಾಳಿ ನಡೆಸಿದರು. ಜೆಡಿಎಸ್‌ ಮತ್ತು ಎಚ್‌ಡಿ ಕುಮಾರಸ್ವಾಮಿಗೆ (H D Kumarswamy) ಅಧಿಕಾರ ಮಾತ್ರ ಮುಖ್ಯವಾಗುತ್ತದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ

ಜೆಡಿಎಸ್‌ ಮೇಲೆ ದೊಡ್ಡ ಪರಿಣಾಮ ಬೀರಲಿದ್ದು, ಕರ್ನಾಟಕದಲ್ಲಿ ಜೆಡಿಎಸ್‌ ಅಂತ್ಯವಾಗಲಿದೆ ಎಂದು ದಿನೇಶ್‌ ಗುಂಡೂರಾವ್‌ ಭವಿಷ್ಯ ನುಡಿದರು.

ಟ್ವಿಟರ್ ನಲ್ಲೂ ಜೆಡಿಎಸ್‌ ವಿರುದ್ಧ ಕಿಡಿ:


ಬಿಜೆಪಿಯ (BJP) ಟೀಂ ಜೆಡಿಎಸ್‌ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಎಚ್‌ ಡಿ ಕುಮಾರಸ್ವಾಮಿ ಅವರು ಈ ಮಾತು ಸತ್ಯ ಎಂದು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್‌ ಪಕ್ಷಕ್ಕೆ ಯಾವುದೇ ತತ್ವ

ಸಿದ್ಧಾಂತಗಳಿಲ್ಲ.‌ ಕೋಮುವಾದಿ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ಧಾಂತವಿದೆ? ಅದೊಂದು ಅವಕಾಶವಾದಿ ಪಕ್ಷ. ಅಧಿಕಾರಕ್ಕಾಗಿ ಯಾರ ಜೊತೆಗಾದರೂ

ಸೈ ಎಂದು ದಿನೇಶ್‌ ಗುಂಡೂರಾವ್‌ ಈ ಬಗ್ಗೆ ಟ್ವೀಟ್‌ ಕೂಡ ಮಾಡಿದ್ದಾರೆ.

ಜೆಡಿಎಸ್‌ ನ ಜಾತ್ಯಾತೀತ ಎಂಬ ಪದ ಕೇವಲ ಸೊಗಸಿಗಷ್ಟೇ ಮೀಸಲು, 2006ರಲ್ಲಿ ಬಿಜೆಪಿ ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಎಚ್‌ ಡಿ ಕುಮಾರಸ್ವಾಮಿ ಎಳ್ಳು‌ ನೀರು ಬಿಟ್ಟಿದ್ದರು.

ಆಗಲೇ ಜೆಡಿಎಸ್‌ನ ಅವನತಿ ಶುರುವಾಗಿದ್ದು, 2004ರಲ್ಲಿ 59 ಸ್ಥಾನ ಗೆದ್ದಿದ್ದ ಜೆಡಿಎಸ್‌ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ ಎಂದಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ

ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಎಚ್‌ ಡಿ ಕುಮಾರಸ್ವಾಮಿ ಅವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ

ಅವತಾರ ಕೊನೆಯಾಗಲಿ‌ ಎಂದು ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಮಾತುಕತೆ?
ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿಯಾಗುವ ಸಾಧ್ಯತೆ ಇದೆ. ಈಗಾಗಲೇ ಎರಡು ಪಕ್ಷದ ನಾಯಕರಿಂದ ಮಾತುಕತೆ ನಡೆಯುತ್ತಿದೆ. ಅಂತಿಮ ಹಂತದ

ಮಾತುಕತೆ ಬಳಿಕ ಮೈತ್ರಿಗೆ ಅಧಿಕೃತ ಮುದ್ರೆ ಬೀಳಲಿದೆ. ಈ ಹಿನ್ನೆಲೆ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕೂಡ ಆಗಿಲ್ಲ. ಮೈತ್ರಿಯಾದರೆ ಎಚ್‌ ಡಿ ಕುಮಾರಸ್ವಾಮಿ ಅವರೇ ಜಂಟಿ ವಿಪಕ್ಷ ನಾಯಕ

ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಭವ್ಯಶ್ರೀ ಆರ್.ಜೆ

Exit mobile version