download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ದೆಹಲಿಯಲ್ಲಿ ಆಕ್ಸಿಜನ್ ಅಭಾವದ ಭೀಕರತೆ: ೨೦ ರೋಗಿಗಳು ಸಾವು

ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್ ​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ದೆಹಲಿ, ಏ. 24: ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ಪೂರೈಕೆ ಮಾಡಲಾಗಿದೆ. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್ ​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article