ಎಟಿಎಂ ಯಂತ್ರ ತುಂಡರಿಸಿ ಲಕ್ಷಾಂತರ ರೂ. ಲೂಟಿ: ಮಂಡ್ಯದ ಮಳವಳ್ಳಿಯಲ್ಲಿ ಘಟನೆ

ಮಂಡ್ಯ, ಮೇ. 24: ಎಟಿಎಂ ಕೇಂದ್ರಗಳಲ್ಲಿ ಕಾವಲುಗಾರ ಇಲ್ಲದಿರುವುದನ್ನೇ ಬಂಡವಾಳ ಮಾಡಿಕೊಂಡ ದುಷ್ಕರ್ಮಿಗಳು ಗ್ಯಾಸ್ ಕಟ್ಟರ್‌ನಿಂದ ಎಟಿಎಂ ಯಂತ್ರವನ್ನು ತುಂಡರಿಸಿ ಲಕ್ಷಾಂತರ ರೂ. ಹಣ ದೋಚಿರುವ ಘಟನೆ ಪಟ್ಟಣದ ಕೊಲ್ಲಿ ಸರ್ಕಲ್‌ನಲ್ಲಿ ನಡೆದಿದೆ.

ತಡರಾತ್ರಿ ನಾಲ್ಕರಿಂದ ಐದು ಮಂದಿ ದುಷ್ಕರ್ಮಿಗಳು ಮೊದಲಿಗೆ ಎಸ್‌ಬಿಐ ಎಟಿಎಂ ಕೇಂದ್ರದ ಮುಂಭಾಗ ಇರುವ ಸಿಸಿಟಿವಿ ಕ್ಯಾಮೆರಾಗಳನ್ನು ಗ್ಯಾಸ್ ಕಟ್ಟರ್‌ನಿಂದ ಸುಟ್ಟು ಹಾಕಿ, ನಂತರ ಒಳ ನುಗ್ಗಿ ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್‌ನಿಂದ ತುಂಡರಿಸಿ 17.50 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ನಂತರ ಎಟಿಎಂ ಯಂತ್ರದ ಕೆಲ ಬಿಡಿ ಭಾಗಗಳನ್ನು ಎಲ್‌ಐಸಿ ಕಚೇರಿ ಮುಂಭಾಗದಲ್ಲಿ ಬಿಸಾಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಅಶ್ವಿನಿ ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿಗಳ ಬಂಧನಕ್ಕೆಬ ಮಳವಳ್ಳಿ ಡಿವೈಎಸ್‌ಪಿ ಲಕ್ಷ್ಮೀನಾರಾಯಣ್ ಪ್ರಸಾದ್ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.