ಪ್ರಪಂಚದಲ್ಲೇ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರ – ಡಿ. ಕೆ. ಶಿವಕುಮಾರ್

ಕಮೀಷನ್‌ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವ ಬೆನ್ನಲ್ಲೆ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕೂಡ ಬಿಜೆಪಿ ಮೇಲೆ ಆರೋಪ ಮಾಡಿದ್ದು ಇಡೀ ಪ್ರಪಂಚದಲ್ಲೇ ಬಿಜೆಪಿಯದ್ಧು ಅತ್ಯಂತ ಭ್ರಷ್ಟ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಸರ್ಕಾರ ನೆರೆಯಿಂದ ಮನೆ ಹಾನಿಯಾದವರಿಗೆ ಪರಿಹಾರ ನೀಡಿಲ್ಲ. ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ.  ಹೀಗಾಗಿ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ  ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ ಜನರು ಬದಲಾವಣೆ ಬಯಸಿದ್ದಾರೆ ಎಂದರು.

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಹಿಂದು ಹಿಂದುತ್ವದ ಬಗ್ಗೆ ರಾಹುಲ್ ಗಾಂಧಿ  ಮಾತನಾಡಿದ್ದಾರೆ. ಗಾಂಧಿಜಿ ಹಿಂದು ನಾವೆಲ್ಲಾ ಹಿಂದು. ಆದರೆ ಬಿಜೆಪಿ  ಹಿಂದುತ್ವವಾದಿಗಳು ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

Exit mobile version