ಜನರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದವರು (DK Shivakumar criticism about modi government) ಎಲ್ಲಿ ಹಾಕಿದರು ಎಂದು ವಾಗ್ದಾಳಿ
ಪ್ರಧಾನಿ ಮೋದಿ ಸಾಲ ಮಾಡಿಲ್ಲವೇ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ? ಎಂದು ಪ್ರಶ್ನಿಸಿದ ಡಿಸಿಎಂ
ಗೃಹಲಕ್ಷ್ಮಿ, ಉಚಿತ ವಿದ್ಯುತ್ ಮೂಲಕ ಜನರಿಗೆ ನೆರವು ನೀಡುತ್ತಿದ್ದೇವೆ ಎಂದ ರಾಜ್ಯ ಸರ್ಕಾರ
Davangere: ಬಿಜೆಪಿ ನಾಯಕರ ಟೀಕೆಯ ಕುರಿತಾಗಿ ದಾವಣಗೆರೆಯಲ್ಲಿ (DK Shivakumar criticism about modi government) ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ‘ಸಾಲದ ಸರ್ಕಾರ’ ಎಂದು ಟೀಕಿಸುತ್ತಿದ್ದಾರೆ.
ಆದರೆ ಕೇಂದ್ರದ ನರೇಂದ್ರ ಮೋದಿ (Narendra Modi) ಸರ್ಕಾರ ಸಾಲವನ್ನೇ ಮಾಡಿಲ್ಲವೇ ಎಂದು ಪ್ರಶ್ನಿಸಿದರು. ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ.
ಜನರ ಆರ್ಥಿಕ ಸಂಕಷ್ಟಗಳನ್ನು ಪರಿಹರಿಸಲು ಕೇಂದ್ರದಿಂದ ಸ್ಪಷ್ಟ ಕ್ರಮಗಳು ಕಾಣಿಸುತ್ತಿಲ್ಲ ಎಂದು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಾವು ಜನರ (DK Shivakumar criticism about modi government) ಕೈಗೆ ನೇರವಾಗಿ ಹಣ ನೀಡುವ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದೆ. ಜೊತೆಗೆ ಉಚಿತ ವಿದ್ಯುತ್, ಉಚಿತ ಅಕ್ಕಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಂತಹ ಯೋಜನೆಗಳ ಮೂಲಕ ಜನರಿಗೆ ನೇರ ಸಹಾಯ ನೀಡುತ್ತಿದ್ದೇವೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳು ಜನರ ಜೀವನಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ ಪ್ರಧಾನಿ ಮೋದಿ ಅವರ ಚುನಾವಣಾ ಭರವಸೆಗಳನ್ನು ಉಲ್ಲೇಖಿಸಿದ ಡಿ.ಕೆ ಶಿವಕುಮಾರ್ (D.K.Shivakuamr) , ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಲಾಗಿತ್ತು.
ಆದರೆ ಆ ಹಣ ಯಾರ ಖಾತೆಗೆ ಜಮಾ ಆಗಿದೆ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ ಎಂದು ಪ್ರಶ್ನಿಸಿದರು. ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೇಂದ್ರ ಸರ್ಕಾರವೂ
ಜನರ ಬ್ಯಾಂಕ್ ಖಾತೆಗಳಿಗೆ ತಿಂಗಳಿಗೆ ಕನಿಷ್ಠ 10,000 ರೂಪಾಯಿ ಆರ್ಥಿಕ ನೆರವು ನೀಡುವ ಯೋಜನೆ ರೂಪಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿ ವಿರುದ್ಧ ಮತ್ತಷ್ಟು ಟೀಕೆ ಮಾಡಿದ ಅವರು, ಬಿಜೆಪಿ (BJP) ಖಾಲಿ ಮಾತುಗಳ ಮೂಲಕ ಜನರನ್ನು ತಪ್ಪು ದಾರಿಗೆಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅಕ್ಕಿಗೆ ಅರಿಶಿನ ಬೆರೆಸಿ ಅದನ್ನು ಅಯೋಧ್ಯೆಯಿಂದ ತಂದಿದ್ದೇವೆ ಎಂದು ಹೇಳಿ ಜನರನ್ನು ಭ್ರಮೆಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಎಲ್‌ಪಿಜಿ ಸಿಲಿಂಡರ್‌ಗಳನ್ನು ಮನೆಮನೆಗೆ ತಲುಪಿಸುವಲ್ಲಿ ಇದೇ ರೀತಿಯ ಪ್ರಯತ್ನ ಏಕೆ ಮಾಡಲಾಗುತ್ತಿಲ್ಲ ಎಂದು ಪ್ರಶ್ನಿಸಿದರು.
ಜನರಿಗೆ ನಿಜವಾದ ಉಪಯೋಗವಾಗುವ ಕೆಲಸಗಳನ್ನು ಮಾಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.
ರಾಜ್ಯ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಮಾತನಾಡಿದ ಅವರು, ಸರ್ಕಾರವನ್ನು ಒಬ್ಬ ವ್ಯಕ್ತಿ ನಡೆಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ನಾನು ಸೇರಿ ಶ್ರಮಿಸಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೇವೆ. ಉಪಚುನಾವಣೆಗಳಲ್ಲಿಯೂ ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ.
ನಮ್ಮೊಂದಿಗೆ ಪಕ್ಷದ ಕಾರ್ಯಕರ್ತರು, ಶಾಸಕರು ಹಾಗೂ ಸಚಿವರು ಇದ್ದಾರೆ. ನಾವು ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುವುದಿಲ್ಲ.
ನೀತಿ ಮತ್ತು ಅಭಿವೃದ್ಧಿಯ ಆಧಾರದ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು. ರಾಜ್ಯ ಸರ್ಕಾರ ಜನಪರ ಯೋಜನೆಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ ಎಂದು ಅವರು ತಿಳಿಸಿದರು.