• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಬಹುತೇಕ ಫೈನಲ್: ಕಾಂಗ್ರೆಸ್‌ನಲ್ಲಿ ತೀವ್ರ ರಾಜಕೀಯ ಚಟುವಟಿಕೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಬಹುತೇಕ ಫೈನಲ್: ಕಾಂಗ್ರೆಸ್‌ನಲ್ಲಿ ತೀವ್ರ ರಾಜಕೀಯ ಚಟುವಟಿಕೆ
0
SHARES
21
VIEWS
Share on FacebookShare on Twitter

ರಾಜ್ಯ ರಾಜಕೀಯದಲ್ಲಿ ಭಾರೀ (DK Shivakumar finalised for CM post) ಸಂಚಲನ: ಡಿಕೆ ಶಿವಕುಮಾರ್ ಗೆ ಒಲಿಯಲಿದೆ ಮುಂದಿನ ಸಿಎ ಪಟ್ಟ

ಪಕ್ಷದೊಳಗಿನ ಸಮಾಲೋಚನೆಗಳ ಬಳಿಕ ಕಾಂಗ್ರೆಸ್‌ನಲ್ಲಿ ಗರಿಗೆದರಿದ ಚಟುವಟಿಕೆ

ಆಂತರಿಕ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆಯಲು ನಾಯಕತ್ವ ಬದಲಾವಣೆ ಮಾಡಲು ಚಿಂತನೆ

Bengaluru : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ (DK Shivakumar finalised for CM post) ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುದ್ದೆಯಿಂದ ಹಿಂದೆ ಸರಿಯುವ ಸಾಧ್ಯತೆಗಳ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ (Highcommand) ನಾಯಕತ್ವ ಬದಲಾವಣೆಯ ಕುರಿತು

ಗಂಭೀರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ದೆಹಲಿ ಹಾಗೂ ಬೆಂಗಳೂರಿನಲ್ಲಿ ನಡೆದ ಸಭೆಗಳು ಈ ರಾಜಕೀಯ ಕುತೂಹಲ ಕೆರಳಿಸಿದೆ

DK Shivakumar finalised for CM post

ಪಕ್ಷದ ಉನ್ನತ ಮೂಲಗಳ ಪ್ರಕಾರ, ಮಂಗಳವಾರ ರಾತ್ರಿ ನಡೆದ ಮಹತ್ವದ ಸಮಾಲೋಚನೆಗಳ (DK Shivakumar finalised for CM post) ಬಳಿಕ ಕಾಂಗ್ರೆಸ್ ನಾಯಕತ್ವ ಡಿಕೆ ಶಿವಕುಮಾರ್ (D.K.Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವತ್ತ ಒಲವು ತೋರಿದೆ ಎಂದು ತಿಳಿದುಬಂದಿದೆ.

2023ರ ವಿಧಾನಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ವರ್ಷಗಳ ಅವಧಿಗೆ ಹಂಚಿಕೊಳ್ಳುವ ಕುರಿತು ಪಕ್ಷದೊಳಗೆ ಒಪ್ಪಂದವಿತ್ತು ಎಂಬ ಮಾತುಗಳು

ಮೊದಲಿನಿಂದಲೂ ಕೇಳಿಬರುತ್ತಿದ್ದವು. ಇದೀಗ ಆ ಭರವಸೆಯನ್ನು ಈಡೇರಿಸುವ ಸಮಯ ಬಂದಿದೆ ಎಂಬ ಅಭಿಪ್ರಾಯ ಕಾಂಗ್ರೆಸ್ ನಾಯಕರಲ್ಲಿಯೂ ವ್ಯಕ್ತವಾಗುತ್ತಿದೆ.

ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ನೇತೃತ್ವ ವಹಿಸುವಂತೆ ಮನವಿ ಮಾಡಲಾಗಿದ್ದರೂ, ವಯಸ್ಸು ಮತ್ತು ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿ ಅವರು ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ.

ರಾಜ್ಯದ ನಾಯಕತ್ವ ಬದಲಾವಣೆ ಕುರಿತ ಚರ್ಚೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಬೆಂಬಲ ಸೂಚಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಕಾಂಗ್ರೆಸ್ ಒಳಗೇ ಉಂಟಾಗಿದ್ದ ಅಸಮಾಧಾನ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದವು.

ಈ ಹಿನ್ನೆಲೆಯಲ್ಲಿ ಸಂಘಟನೆಗೆ ಹೊಸ ಚೈತನ್ಯ ತುಂಬಿ, 2028ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡುವ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಡಿಕೆಶಿ ಅವರ ಸಂಘಟನಾ ಸಾಮರ್ಥ್ಯ ಹಾಗೂ ಚುನಾವಣಾ ತಂತ್ರಗಾರಿಕೆಯೇ ಅವರಿಗೆ ಬಲವಾಗಿ ಪರಿಣಮಿಸಿದೆ.

ಇನ್ನೊಂದೆಡೆ, ಡಿಕೆ ಶಿವಕುಮಾರ್ ಅವರು ತಮ್ಮ ಆಧ್ಯಾತ್ಮಿಕ ಮಾರ್ಗದರ್ಶಕ ಹಾಗೂ ಜ್ಯೋತಿಷಿ ರಾಜಗುರು ಬೆಳ್ಳೂರು ಶಂಕರನಾರಾಯಣ ದ್ವಾರಕನಾಥ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಆಶೀರ್ವಾದ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗುರೂಜಿ, “ಮುಖ್ಯಮಂತ್ರಿಯಾಗಿ ಅಧಿಕೃತ ಘೋಷಣೆಗೆ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ. ಉತ್ತಮ ಆಡಳಿತ, ಮಹಿಳೆಯರಿಗೆ ರಾಜಕೀಯದಲ್ಲಿ 33

ಪ್ರತಿಶತ ಮೀಸಲಾತಿ, ಭ್ರಷ್ಟಾಚಾರ ನಿಯಂತ್ರಣ ಮತ್ತು ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಹುಟ್ಟುವಂತೆ ಮಾಡಿವೆ.

ಒಟ್ಟಾರೆ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಹತ್ವದ ರಾಜಕೀಯ ನಿರ್ಧಾರ

ಹೊರಬೀಳುವ ಸಾಧ್ಯತೆಗಳಿವೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ನಡುವೆ ರಾಜಕೀಯ ಚಟುವಟಿಕೆಗಳು ಗರಿಗೆದರಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದರತ್ತ ರಾಜ್ಯದ ರಾಜಕೀಯ ವಲಯ ಕಾತರದಿಂದ ಕಾದಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ

ಹುದ್ದೆ ಒಲಿಯುತ್ತದೆಯೇ ಅಥವಾ ಕೊನೆಯ ಕ್ಷಣದಲ್ಲಿ ಮತ್ತೇನಾದರೂ ರಾಜಕೀಯ ತಿರುವು ಸಿಗುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಇದನ್ನು ಓದಿ : https://vijayatimes.com/carcinogenic-coloring-in-bakery-items/

Tags: chiefministerCongressdkshivakumarKarnatakapolitics

Related News

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ
ಪ್ರಮುಖ ಸುದ್ದಿ

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ

June 12, 2026
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

June 11, 2026
ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ
Sports

ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

June 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.