• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಚಿವ ಸಂಪುಟದ ಮೊದಲ ಸಭೆಯಲ್ಲೇ ಆರು ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ಬೆಂಗಳೂರು ರಸ್ತೆ ಅಭಿವೃದ್ಧಿವರೆಗೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸಚಿವ ಸಂಪುಟದ ಮೊದಲ ಸಭೆಯಲ್ಲೇ ಆರು ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ಬೆಂಗಳೂರು ರಸ್ತೆ ಅಭಿವೃದ್ಧಿವರೆಗೆ
0
SHARES
11
VIEWS
Share on FacebookShare on Twitter

ಜನಪರ ಆಡಳಿತಕ್ಕೆ ಚಾಲನೆ: ಮೊದಲ ಸಭೆಯಲ್ಲೇ (dk shivakumar first cabinet meeting) ಮಹತ್ವದ ತೀರ್ಮಾನಗಳ ಪಟ್ಟಿ ಬಿಡುಗಡೆ

ವಿದ್ಯಾರ್ಥಿ, ಯುವಕರು, ನಿವೇಶನದಾರರು ಮತ್ತು ನಗರಾಭಿವೃದ್ಧಿಗೆ ಆದ್ಯತೆ ನೀಡಿದ ಡಿಕೆ ಶಿವಕುಮಾರ್ ಸರ್ಕಾರ

ಬೆಂಗಳೂರು ರಸ್ತೆ ಸುಧಾರಣೆ, ಕಟ್ಟಡ ಮಾಲೀಕರಿಗೆ ವಿನಾಯಿತಿ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು

Bengaluru : ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Shivakumar) ನೇತೃತ್ವದಲ್ಲಿ ನಡೆದ ಮೊದಲ (dk shivakumar first cabinet meeting) ಸಚಿವ ಸಂಪುಟ ಸಭೆಯಲ್ಲೇ ರಾಜ್ಯದ ಜನರಿಗೆ ಹಲವು ಮಹತ್ವದ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಆರು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಭೆಯಲ್ಲಿ ವಿದ್ಯಾರ್ಥಿಗಳು, ಯುವಕರು, ನಿವೇಶನದಾರರು ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದ ಜನಪರ ನಿರ್ಧಾರಗಳನ್ನು ಘೋಷಿಸುವ ಮೂಲಕ ಸರ್ಕಾರ ಹೊಸ ಆಡಳಿತದ ದಿಕ್ಕನ್ನು ಸ್ಪಷ್ಟಪಡಿಸಿದೆ.

dk shivakumar first cabinet meeting

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯ ಪ್ರಮುಖ ಆಕರ್ಷಣೆಯಾಗಿ ರಾಜ್ಯದ ಎಲ್ಲ (dk shivakumar first cabinet meeting) ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಲಾಗಿದೆ.

ಎಸ್‌ಎಸ್‌ಎಲ್‌ಸಿ (SSLC) , ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳನ್ನೂ ಒಳಗೊಂಡಂತೆ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದೆ.

ವಿದ್ಯಾರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ (Bus Pass) ಪಡೆಯಬಹುದು. ಈ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ

ಸುಮಾರು 250 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಭಾರವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿ ಇದು ಪರಿಗಣಿಸಲಾಗಿದೆ.

ಯುವಕರ ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶದಿಂದ ಖಾಸಗಿ ಉದ್ಯೋಗ ವಿನಿಮಯ ಕೇಂದ್ರ (Employment Exchange) ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

ಖಾಸಗಿ ಕಂಪನಿಗಳು ತಮ್ಮ ಉದ್ಯೋಗ ಅಗತ್ಯಗಳನ್ನು ಈ ಕೇಂದ್ರದಲ್ಲಿ ನೋಂದಾಯಿಸಬೇಕಾಗುತ್ತದೆ. ಉದ್ಯಮಗಳ ಬೇಡಿಕೆಗೆ ಅನುಗುಣವಾಗಿ ಯುವಕರಿಗೆ ಸರ್ಕಾರದಿಂದಲೇ ತರಬೇತಿ ನೀಡಿ, ನುರಿತ ಮಾನವ ಸಂಪನ್ಮೂಲವನ್ನು ಖಾಸಗಿ ಸಂಸ್ಥೆಗಳಿಗೆ ಒದಗಿಸುವ ವ್ಯವಸ್ಥೆ ಜಾರಿಗೆ ಬರಲಿದೆ.

ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗುವಂತೆ ವಿಶೇಷ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಯೋಜನೆಯ ರೂಪುರೇಷೆ ಸಿದ್ಧಪಡಿಸಲು ಸಚಿವರ ಸಮಿತಿಯೊಂದನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸಲಾಗುವುದು.

ರಾಜ್ಯದ ಯುವಜನತೆಯನ್ನು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಲು “ಭಾರತ ಜೋಡೋ ಯುವಕರ ಸಂಘ” ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಸರ್ಕಾರ ಘೋಷಿಸಿದೆ.

ರಾಜ್ಯದಾದ್ಯಂತ 10,000 ಯುವಕರ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಪಂಚಾಯಿತಿಯಲ್ಲಿ ಸುಮಾರು 150 ಯುವಕರ ತಂಡಗಳನ್ನು ನಿರ್ಮಿಸಲಾಗುವುದು.

ಪ್ರತಿ ಸಂಘಕ್ಕೆ 10 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತದೆ. ಯುವ ನಾಯಕರನ್ನು ಬೆಳೆಸುವುದು, ಸಾಮಾಜಿಕ ಸಾಮರಸ್ಯ ಕಾಪಾಡುವುದು ಹಾಗೂ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಇದರ ಜೊತೆಗೆ, 2500 ಚದರ ಅಡಿ ವರೆಗಿನ ನಿವೇಶನಗಳಲ್ಲಿ ನಿರ್ಮಾಣಗೊಂಡ ಕಟ್ಟಡಗಳಿಗೆ ಒಸಿ ಮತ್ತು ಸಿಸಿ ಪಡೆಯುವ ನಿಯಮದಲ್ಲಿ ವಿನಾಯಿತಿ ನೀಡುವ ಮಹತ್ವದ ನಿರ್ಧಾರವೂ ಕೈಗೊಳ್ಳಲಾಗಿದೆ.

ನಗರಾಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಬಿ ಖಾತಾದಿಂದ ಎ ಖಾತಾಕ್ಕೆ ಪರಿವರ್ತನೆ ಮಾಡುವ ಯೋಜನೆಯನ್ನು ರಾಜ್ಯದ ಎಲ್ಲಾ ನಗರ ಹಾಗೂ ಗ್ರಾಮೀಣ

ಪ್ರದೇಶಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಇದರಿಂದ ಸಾವಿರಾರು ನಿವೇಶನ ಮಾಲೀಕರಿಗೆ ಕಾನೂನುಬದ್ಧ ದಾಖಲೆಗಳ ಸೌಲಭ್ಯ ದೊರೆಯಲಿದೆ.

ಇದೇ ವೇಳೆ ಬೆಂಗಳೂರಿನ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಗಳಿಗೆ 2,000 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೊದಲ ಸಭೆಯಲ್ಲೇ ಜನಪರ ಹಾಗೂ ಅಭಿವೃದ್ಧಿಮುಖಿ ತೀರ್ಮಾನಗಳನ್ನು ಘೋಷಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಆಡಳಿತ ಶೈಲಿಯ ಬಗ್ಗೆ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಇದನ್ನು ಓದಿ : https://vijayatimes.com/countdown-to-d-k-shivakumar-oath/

Tags: cabinetCongressdkshivakumarKarnatakameetingpolitical

Related News

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ
ಪ್ರಮುಖ ಸುದ್ದಿ

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ

June 12, 2026
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

June 11, 2026
ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ
Sports

ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

June 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.