• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿವಕುಮಾರ್ : ಸ್ವಾತಂತ್ರ್ಯ ದಿನದಂದು ಸಿಎಂ ಘೋಷಣೆಗಳ ಸುರಿಮಳೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿವಕುಮಾರ್ : ಸ್ವಾತಂತ್ರ್ಯ ದಿನದಂದು ಸಿಎಂ ಘೋಷಣೆಗಳ ಸುರಿಮಳೆ
0
SHARES
9
VIEWS
Share on FacebookShare on Twitter

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್‌ರಿಂದ (DK Shivakumar flag hoisting) ಮಹತ್ವದ ಘೋಷಣೆಗಳು

ಯುವಕರಿಗೆ ಗುಡ್‌ನ್ಯೂಸ್: 72 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಭರ್ಜರಿ ಘೋಷಣೆ

ಬೆಂಗಳೂರು ಪೊಲೀಸ್ ವ್ಯವಸ್ಥೆ ಪುನರ್‌ರಚನೆಯಿಂದ ಕೆರೆಗಳ ಅಭಿವೃದ್ಧಿವರೆಗೆ; ಕೃಷಿ ಮತ್ತು ಉದ್ಯೋಗ ಕ್ಷೇತ್ರಕ್ಕೂ ತಂತ್ರಜ್ಞಾನದ ಸ್ಪರ್ಶ

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ (DK Shivakumar flag hoisting) ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ (Field Marshal Manik Shah parade) ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣ, ಕೃಷಿ, ಬೆಂಗಳೂರು ನಗರದ ಮೂಲಸೌಕರ್ಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳನ್ನು ಮಾಡಿದರು.

7.5 ಕೋಟಿ ಕನ್ನಡಿಗರು ಹಾಗೂ ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಅವರು, ಅಭಿವೃದ್ಧಿಯ ಹೊಸ ದಿಕ್ಕಿನತ್ತ ಕರ್ನಾಟಕವನ್ನು ಕೊಂಡೊಯ್ಯುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಹೊಸ ಯೋಜನೆಗಳನ್ನು ಘೋಷಿಸಿದೆ. ವಿವಿಧ ಇಲಾಖೆಗಳಲ್ಲಿರುವ 72 ಸಾವಿರ ಪ್ರಮುಖ ಖಾಲಿ ಹುದ್ದೆಗಳ

ಭರ್ತಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಮುಂದಿನ ಆರು ತಿಂಗಳಲ್ಲಿ ಉಳಿದ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಉದ್ಯೋಗಾಕಾಂಕ್ಷಿ ಯುವಕರಿಗಾಗಿ ‘ಯುವ ಉದ್ಯೋಗ ಸೇತು’ ಯೋಜನೆ ಜಾರಿಗೆ ಬರಲಿದ್ದು, ಉದ್ಯೋಗ (DK Shivakumar flag hoisting) ಹುಡುಕುವವರು,

ಉದ್ಯೋಗ ನೀಡುವವರು ಹಾಗೂ ಕೌಶಲ್ಯಾಭಿವೃದ್ಧಿ ಸಂಸ್ಥೆಗಳನ್ನು ಒಂದೇ ವೇದಿಕೆಗೆ ತರಲು ಸಮಗ್ರ ತಂತ್ರಾಂಶ ರೂಪಿಸಲಾಗುವುದು.

ಅಲ್ಲದೆ, 100 ಸರ್ಕಾರಿ ಐಟಿಐಗಳನ್ನು ಉದ್ಯೋಗ ಆಧಾರಿತ ಕ್ಯಾಂಪಸ್‌ಗಳಾಗಿ ಅಭಿವೃದ್ಧಿಪಡಿಸಿ, ಖಾಸಗಿ ಕೈಗಾರಿಕೆಗಳ ಸಹಯೋಗದಲ್ಲಿ 10 ಸಾವಿರ ಯುವಕರಿಗೆ

ಉದ್ಯೋಗ ಕಲ್ಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ.

‘ವಿದ್ಯಾರ್ಥಿ ಸಹಾಯಹಸ್ತ’ ಯೋಜನೆಯಡಿ 1ರಿಂದ 10ನೇ ತರಗತಿವರೆಗೆ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಇರುವ ಶೇ.15ರ ಗ್ರಾಮೀಣ ಮೀಸಲಾತಿಯೊಳಗೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಘೋಷಿಸಲಾಗಿದೆ.

ವೈದ್ಯಕೀಯ, ಎಂಜಿನಿಯರಿಂಗ್ (Engineering) ಸೇರಿದಂತೆ ವೃತ್ತಿಪರ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ.

ಇದೇ ವೇಳೆ, ರಾಜ್ಯದ ಶಾಲೆಗಳಲ್ಲಿ 6ನೇ ತರಗತಿಯಿಂದ ಕೃತಕ ಬುದ್ಧಿಮತ್ತೆ ಶಿಕ್ಷಣ ಪರಿಚಯಿಸುವುದಾಗಿ ತಿಳಿಸಿದ ಅವರು, ‘AI ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಯೋಜನೆಗಳನ್ನು ಘೋಷಿಸಿದರು.

ಬೆಂಗಳೂರಿನಲ್ಲಿ ಭಾರತದ ಮೊದಲ ಸಾರ್ವಜನಿಕ AI ವಿಶ್ವವಿದ್ಯಾಲಯ ಸ್ಥಾಪಿಸುವ ಉದ್ದೇಶವಿದ್ದು, 2027ರ ಜನವರಿಯಿಂದ AI ಪ್ರಮಾಣಪತ್ರ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದರು.ಬೆಂಗಳೂರು ನಗರದ ಅಭಿವೃದ್ಧಿಗೂ ಹಲವು ಯೋಜನೆಗಳನ್ನು ಪ್ರಕಟಿಸಲಾಯಿತು.

ಸಂಚಾರ ದಟ್ಟಣೆಯಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಲಾಲ್‌ಬಾಗ್ ಮಾದರಿಯಲ್ಲಿ ಐದು ಟ್ರೀ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ತುರುಹಳ್ಳಿ ಮಿನಿ ಫಾರೆಸ್ಟ್, ತೊಟ್ಟಿಕಲ್ಲು ಫಾಲ್ಸ್, ನೆಟ್ಟಿಗೆರೆ, ಬಿ.ಎಂ. ಕಾವಲ್ (B.M. Kaval) , ಬಸವನ್ತರ ಹಾಗೂ ಮಂದೂರು–ಜ್ಯೋತಿಪುರ ಪ್ರದೇಶಗಳಲ್ಲಿ ಹಸಿರು ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು.

ಜೊತೆಗೆ ಅಂತರ್ಜಲ ಮರುಪೂರಣ ಹಾಗೂ ನಗರದ ನೀರಿನ ಭದ್ರತೆಗಾಗಿ ಹೆಸರಘಟ್ಟ, ಬೆಟ್ಟದ ಕೋಟೆ, ಹೊಸಕೋಟೆ, ಎಲೆ ಮಲ್ಲಪ್ಪ ಶೆಟ್ಟಿ, ಬನ್ನೇರುಘಟ್ಟ, ಬಾಗಲೂರು ಹಾಗೂ ಬೈರಮಂಗಲ ಸೇರಿದಂತೆ ಏಳು ಕೆರೆಗಳನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸಲು ಬೆಂಗಳೂರು ಪೊಲೀಸ್ ಕಮಿಷನರೇಟ್‌ನ್ನು (Commissionerate) ಐದು ಪ್ರತ್ಯೇಕ ಕಮಿಷನರೇಟ್‌ಗಳಾಗಿ ಪುನರ್‌ರಚಿಸುವ ಯೋಜನೆಯನ್ನೂ ಘೋಷಿಸಿದರು.

ಕೃಷಿ ಕ್ಷೇತ್ರದಲ್ಲೂ ತಂತ್ರಜ್ಞಾನ ಬಳಕೆಗೆ ಸರ್ಕಾರ ಮುಂದಾಗಿದೆ. ‘ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ’ ಅಡಿಯಲ್ಲಿ ಡ್ರೋನ್‌ಗಳು ಮತ್ತು ಉಪಗ್ರಹ ಚಿತ್ರಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುವುದು.

ನೈಜ ಸಮಯದ ಮಾಹಿತಿಯ ಆಧಾರದ ಮೇಲೆ ರೈತರಿಗೆ ಬೆಳೆಗಳ ಸ್ಥಿತಿ, ಕೀಟ ಮತ್ತು ರೋಗಬಾಧೆ ಹಾಗೂ ಮಾರುಕಟ್ಟೆ ಪರಿಸ್ಥಿತಿಯ ಕುರಿತು ನಿಖರ ಮಾಹಿತಿ ಒದಗಿಸುವ ಉದ್ದೇಶವಿದೆ.

ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ‘ಉದ್ಯೋಗ ನಿಧಿ’ ಯೋಜನೆಯನ್ನೂ ಜಾರಿಗೆ ತರಲಾಗುವುದು.

ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ₹2,500ರಂತೆ ಎರಡು ವರ್ಷಗಳ ಕಾಲ ಪ್ರೋತ್ಸಾಹಧನ ನೀಡುವ ಮೂಲಕ ಒಂದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ.

ಇದನ್ನು ಓದಿ : https://vijayatimes.com/silicon-city-gears-up-for-independence-day/

Tags: CongressdkshivakumarFlaghostingIndependence dayKarnatakapolitical

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.