Visit Channel

ನೂತನ ಶಿಕ್ಷಣ ನೀತಿಗೆ ನಮ್ಮ ವಿರೋಧ – ಡಿ.ಕೆ ಶಿವಕುಮಾರ್

ಬೆಂಗಳುರು ಸೆ24 :  ನಮ್ಮ ಒಪ್ಪಿಗೆ ಇಲ್ಲದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದರೆ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವದನ್ನು ಹಿಂಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ

ಈ ಬಗ್ಗೆ ಮಾತನಾಡಿದ ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರವಾಗಿ ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಶಿಕ್ಷಣ ನೀತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ರಾಜ್ಯ ಸರ್ಕಾರ ಇದನ್ನು ಜಾರಿಗೊಳಿಸಿದ್ದೇ ಆದರೆ, ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವಿದನ್ನು ಹಿಂಪಡೆಯುತ್ತೇವೆ ಎಂದರು.

ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಕೇಳಿದೆವು, ಆದರೆ ಇದಕ್ಕೆ ಅವಕಾಶ ಕೊಟ್ಟಿಲ್ಲ. ಈ ಶಿಕ್ಷಣ ನೀತಿ ಜಾರಿಗೆ ತರಲು ಅವರದೇ ಸಂಪುಟದ ಸಚಿವರಿಗೆ, ಸರ್ಕಾರಕ್ಕೆ ಇಷ್ಟವಿಲ್ಲ. ಕೇವಲ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಗುಜರಾತ್ ನಲ್ಲಿ ಈ ಶಿಕ್ಷಣ ನೀತಿ ಜಾರಿಗೊಳಿಸಲಿ. ನಮ್ಮ ರಾಜ್ಯದಲ್ಲಿ ಈ ನೀತಿ ಜಾರಿಗೆ ಅವಕಾಶ ನೀಡುವುದಿಲ್ಲ. ಇದು ನಮ್ಮ ಮಕ್ಕಳ ಭವಿಷ್ಯದ ವಿಚಾರ, ನಾವಿದನ್ನು ವಿರೋಧಿಸುತ್ತೇವೆ. ಈ ಶಿಕ್ಷಣ ನೀತಿ ನಮ್ಮ ರಾಜ್ಯಕ್ಕೆ ಅವಶ್ಯಕತೆ ಇಲ್ಲ. ಜೊತೆಗೆ ರಾಜ್ಯ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲೂ ಇದು ಅನುಷ್ಠಾನಗೊಳ್ಳುತ್ತಿಲ್ಲ. ನಮ್ಮ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವರು ಈ ನೀತಿಯ ಅನುಷ್ಠಾನ ಕ್ಲಿಷ್ಟವಾಗಿದ್ದು, ಅದರ ಅಧ್ಯಯನ ನಡೆಯಬೇಕು ಎಂದು ಹೇಳಿದ್ದಾರೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡೋಣ, ಇದರಲ್ಲಿ ಏನೆಲ್ಲಾ ಪ್ರಯೋಜನವಾಗಲಿದೆ ಎಂಬುದನ್ನು ಸ್ಪಷ್ಟಪಡಿಸಿ ಎಂದೆವು. ಅದನ್ನು ಬಿಟ್ಟು ಜಾರಿಗೆ ಮುಂದಾಗಿದ್ದಾರೆ. ಇವರು ಆರ್ ಎಸ್ಎಸ್ ಅಜೆಂಡಾ, ನಾಗ್ಪುರ ಅಜೆಂಡಾಗಳನ್ನು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳಲಿ ಎಂದು ಅವರು ಆಕ್ರೋಶ ವೆಕ್ತಪಡಿಸಿದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.