• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ, ನರೇಗಾ, ಜಲ ಜೀವನ್ ಮಿಷನ್ ಅನುದಾನ ವಿಳಂಬ: ಕೇಂದ್ರದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ

Teju Srinivas by Teju Srinivas
in ರಾಜ್ಯ, ವಿಜಯ ಟೈಮ್ಸ್‌
ಭದ್ರಾ ಮೇಲ್ದಂಡೆ ಯೋಜನೆ, ನರೇಗಾ, ಜಲ ಜೀವನ್ ಮಿಷನ್ ಅನುದಾನ ವಿಳಂಬ: ಕೇಂದ್ರದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ
0
SHARES
12
VIEWS
Share on FacebookShare on Twitter
  • ಅನುದಾನ ಬಿಡುಗಡೆ ವಿಳಂಬಕ್ಕೆ ಕೇಂದ್ರವೇ (Dk Shivakumar slams on Centre) ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
  • ಭದ್ರಾ ಮೇಲ್ದಂಡೆ, ನರೇಗಾ, ಜಲ ಜೀವನ್ ಮಿಷನ್ ಹಣ ಬಾಕಿ ಕುರಿತು ವಿಧಾನಸಭೆಯಲ್ಲಿ ತೀವ್ರ ಚರ್ಚೆ
  • ಗೃಹಲಕ್ಷ್ಮಿ ಹಣ ಬಿಡುಗಡೆ ವಿಚಾರವಾಗಿ ಸದನದಲ್ಲಿ ಡಿಸಿಎಂ ಸ್ಪಷ್ಟನೆ

Belgavi: ಭದ್ರಾ ಮೇಲ್ದಂಡೆ ಯೋಜನೆ, ನರೇಗಾ ಹಾಗೂ ಜಲ ಜೀವನ್ ಮಿಷನ್ (Dk Shivakumar slams on Centre) ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದ ಬಾಕಿ ಅನುದಾನವನ್ನು ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ನಡೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಅನುದಾನಗಳನ್ನು ಬಿಡುಗಡೆ ಮಾಡದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ದಿವಾಳಿಯಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ಚಾಟಿ ಬೀಸಿದರು.

ವಿಧಾನಸಭೆಯ ಕಲಾಪದ ವೇಳೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಷಯವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.

Dk Shivakumar slams on Centre

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಸದನಕ್ಕೆ ತಪ್ಪು

ಮಾಹಿತಿ ನೀಡಿದ್ದಾರೆ (Dk Shivakumar slams on Centre) ಎಂಬ ವಿಪಕ್ಷ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್,

ಜನಪ್ರತಿನಿಧಿಯಾಗಿ ಅವರು ತಮ್ಮ ಕ್ಷೇತ್ರದ ಜನರ ಅಭಿಪ್ರಾಯದ ಆಧಾರದಲ್ಲಿ ಪ್ರಶ್ನೆ ಕೇಳಿದ್ದಾರೆ.

ಆ ಪ್ರಶ್ನೆಗೆ ಸಚಿವರು ಉತ್ತರ ನೀಡಿದ ಸಂದರ್ಭದಲ್ಲೂ ನಾನು ಇದ್ದೆ.

ಕಂತುಗಳ ಆಧಾರದಲ್ಲಿ ಹಣ ಪಾವತಿಯಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದರು. ಸೆಪ್ಟೆಂಬರ್ ತಿಂಗಳವರೆಗೂ ಹಣ ಬಿಡುಗಡೆಯಾಗಿದೆ ಎಂಬ ಮಾಹಿತಿ ಸದನಕ್ಕೆ ನೀಡಲಾಗಿದೆ ಎಂದು ವಿವರಿಸಿದರು.

ಈ ಮಧ್ಯೆ ಎರಡು ತಿಂಗಳ ಹಣ ಬಂದಿಲ್ಲ ಎಂಬ ಪ್ರಶ್ನೆ ಎತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಈ ವಿಚಾರವನ್ನು ಹಣಕಾಸು ಇಲಾಖೆಯ ಜವಾಬ್ದಾರಿ

ಹೊತ್ತಿರುವ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ತಾಂತ್ರಿಕ ಹಾಗೂ ಪ್ರಕ್ರಿಯಾತ್ಮಕ ಕಾರಣಗಳಿಂದ ಕೆಲವೊಂದು ವಿಳಂಬಗಳಾಗಿರಬಹುದು.

ಆದರೆ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಒಪ್ಪಿಕೊಳ್ಳಿ ಎಂದು

ಬಿಜೆಪಿ ಶಾಸಕ ಸುನೀಲ್ ಕುಮಾರ್ (Sunil Kumar) ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ನಿಮ್ಮ ಮಾತುಗಳು

ಅಸಂಬದ್ಧವಾಗಿವೆ ಎಂದು ಕಿಡಿಕಾರಿದರು.

ಇನ್ನು ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ವಿಳಂಬದ ಕುರಿತು ಉದಾಹರಣೆ ನೀಡಿದ ಡಿಸಿಎಂ, ನಿಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದ್ದರು.

ಅದರ ಆಧಾರದ ಮೇಲೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ರಾಜ್ಯ ಬಜೆಟ್‌ನಲ್ಲೂ

ಹಣ ಘೋಷಣೆ ಮಾಡಿದ್ದರು. ಆದರೆ ಇಂದಿಗೂ ಆ ಹಣ ಬಿಡುಗಡೆಯಾಗಿಲ್ಲ.

ಇನ್ನು ನರೇಗಾ ಹಾಗೂ ಜಲ ಜೀವನ್ ಮಿಷನ್ ಯೋಜನೆಗಳಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿ ಅನುದಾನವೂ ಬಾಕಿಯಾಗಿದೆ.

ಹಾಗೆಂದು ನಾವು ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎಂದು ಹೇಳುವುದಿಲ್ಲ ಎಂದು ಹರಿಹಾಯ್ದರು.

ಕೊನೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ

ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆಯಾದರೂ ಒಪ್ಪುವುದಿಲ್ಲ ಎಂದು ಹೇಳಿದ್ದರು.

ನಾವು ಘೋಷಿಸಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಬದ್ಧರಾಗಿದ್ದೇವೆ. ನಮ್ಮ ಯೋಜನೆಗಳನ್ನು ನಕಲು

ಮಾಡಿಕೊಂಡೇ ಎನ್‌ಡಿಎ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತಿದೆ.

ಈ ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇದನ್ನು ಓದಿ : https://vijayatimes.com/no-fuel-without-puc-certificate/
Tags: belgavibhadraDCMdkshivakumarKarnatakariver

Related News

ಇನ್ಮುಂದೆ ದಿನದ 24 ಗಂಟೆಯೂ ಅಂಚೆ ಕಚೇರಿ ಸೇವೆ: ಕೆಲ ಆಯ್ದ ಶಾಖೆಗಳಲ್ಲಿ ಮಾತ್ರವೇ ಈ ಸೇವೆ ಲಭ್ಯ
ದೇಶ-ವಿದೇಶ

ಇನ್ಮುಂದೆ ದಿನದ 24 ಗಂಟೆಯೂ ಅಂಚೆ ಕಚೇರಿ ಸೇವೆ: ಕೆಲ ಆಯ್ದ ಶಾಖೆಗಳಲ್ಲಿ ಮಾತ್ರವೇ ಈ ಸೇವೆ ಲಭ್ಯ

January 24, 2026
ಇನ್ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ
ಪ್ರಮುಖ ಸುದ್ದಿ

ಇನ್ಮುಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ

January 24, 2026
ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಪ್ರಕರಣ: ಎಂಟು ಮಂದಿಯ ವಶ, ತನಿಖೆ ತೀವ್ರ
ಪ್ರಮುಖ ಸುದ್ದಿ

ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಪ್ರಕರಣ: ಎಂಟು ಮಂದಿಯ ವಶ, ತನಿಖೆ ತೀವ್ರ

January 24, 2026
Census 2026-27: ಏಪ್ರಿಲ್ನಿಂದಲೇ ಜನಗಣತಿ ಮೊದಲ ಹಂತ ಆರಂಭ : ಮನೆ, ಆಹಾರ ಪದ್ಧತಿ, ಇಂಧನ ಬಳಕೆ, ಮೊಬೈಲ್ ಸಂಖ್ಯೆ ಸೇರಿ ಇಂಚಿಂಚು ಮಾಹಿತಿ ಸಂಗ್ರಹ
ದೇಶ-ವಿದೇಶ

Census 2026-27: ಏಪ್ರಿಲ್ನಿಂದಲೇ ಜನಗಣತಿ ಮೊದಲ ಹಂತ ಆರಂಭ : ಮನೆ, ಆಹಾರ ಪದ್ಧತಿ, ಇಂಧನ ಬಳಕೆ, ಮೊಬೈಲ್ ಸಂಖ್ಯೆ ಸೇರಿ ಇಂಚಿಂಚು ಮಾಹಿತಿ ಸಂಗ್ರಹ

January 23, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.