ಜಮೀರ್‍ನ ಆಹಾರ ಕಿಟ್ ವಿತರಣೆಗೂ, ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ : ಡಿ.ಕೆ ಶಿವಕುಮಾರ್!

dk shivkumar

ಹುಬ್ಬಳ್ಳಿಯಲ್ಲಿ(Hubbali) ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಕುಟುಂಬಗಳಿಗೆ ಆಹಾರ ಕಿಟ್(Food Kits) ಮತ್ತು ನಗದು ಹಣ ನೀಡುವ ವಿಚಾರಕ್ಕೂ ಕಾಂಗ್ರೆಸ್ ಪಕ್ಷಕ್ಕೂ(Congress Party) ಸಂಬಂಧವಿಲ್ಲ.

ಹುಬ್ಬಳ್ಳಿಯಲ್ಲಿ ಆಹಾರ ಕಿಟ್ ವಿತರಿಸುತ್ತಿರುವುದು ಅವರ ವೈಯಕ್ತಿಕ ವಿಚಾರ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ(Congress MLA) ಜಮೀರ್ ಅಹ್ಮದ್(Jameer Ahmed), ಗಲಭೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳ ಕುಟುಂಬಗಳಿಗೆ ಆಹಾರ ಕಿಟ್ ಮತ್ತು 5 ಸಾವಿರ ರೂ. ನಗದು ನೀಡಲು ಮುಂದಾಗಿದ್ದರು. ಕಾಂಗ್ರೆಸ್ ಶಾಸಕರ ಈ ನಡೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಡಿ.ಕೆ ಶಿವಕುಮಾರ್ ಅವರು,

ಸಮಾಜದಲ್ಲಿ ಶಾಂತಿ ಕೆಡಿಸುತ್ತಿರುವ ಭಜರಂಗದಳ, ವಿಶ್ವಹಿಂದೂ ಪರಿಷತ್, ಶ್ರೀರಾಮ್ ಸೇನೆ, ಎಸ್‍ಡಿಪಿಐ, ಪಿಎಫ್‍ಐನಂತಹ ಸಂಘಟನೆಗಳನ್ನು ಕಾಂಗ್ರೆಸ್ ಎಂದಿಗೂ ಬೆಂಬಲಿಸುವುದಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಬಿಜೆಪಿ ಮತ್ತು ಪಿಎಫ್‍ಐನಂತ ಸಂಘಟನೆಗಳ ಷಡ್ಯಂತ್ರವಿದೆ ಎಂದು ಆರೋಪಿಸಿದರು. ಇನ್ನು ಆರೋಪಿಗಳ ಕುಟುಂಬಗಳಿಗೆ ಯಾರಾದರೂ ಆಹಾರ ಕಿಟ್ ವಿತರಿಸಿದರೆ ಅದು ಅವರ ವೈಯಕ್ತಿಕ ವಿಚಾರ.

ಕಾಂಗ್ರೆಸ್ ಪಕ್ಷಕ್ಕೂ ಈ ರೀತಿಯ ಕಾರ್ಯಕ್ರಮಗಳಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷ ಈ ನೆಲೆದ ಕಾನೂನು ಮತ್ತು ಸಂವಿಧಾನಕ್ಕೆ ಬದ್ದವಾಗಿದೆ ಎಂದು ಹೇಳಿದ್ದಾರೆ. ಇನ್ನು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಕುಟಂಬಗಳಿಗೆ ಪುಡ್‍ಕಿಟ್ ಮತ್ತು 5 ಸಾವಿರ ರೂ. ನಗದು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಮೀರ್ ಅಹ್ಮದ್ ಸದ್ಯ ಸೌದಿ ಅರೇಬಿಯಾದ ಮೆಕ್ಕಾದಲ್ಲಿದ್ದು, ಅಲ್ಲಿಂದಲೇ ಈ ಕಾರ್ಯಕ್ರಮವನ್ನು ತಮ್ಮ ಶಿಷ್ಯರ ಮೂಲಕ ಆಯೋಜನೆ ಮಾಡಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ಗಲಭೆಯಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ. ಇನ್ನು ಮುಂದೆ ಈ ರೀತಿ ಮಾಡದಂತೆ ಆ ದೇವರು ಅವರಿಗೆ ಬುದ್ದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪವಿತ್ರ ರಂಜಾನ್ ತಿಂಗಳಿನಲ್ಲಿ ಬಂಧಿತರಾಗಿರುವರ ಕುಟುಂಬಕ್ಕೆ ಆಹಾರ ಕಿಟ್ ಮತ್ತು 5 ಸಾವಿರ ರೂ. ನೀಡಲು ನಿರ್ಧರಿಸಿದ್ದೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದರು.

Exit mobile version