ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ : ಡಿಕೆಶಿ!

dk shivkumar

ಶಾಲಾ(School) ಪಠ್ಯಕ್ರಮದಲ್ಲಿ(Textbooks) ನಮ್ಮ ಧರ್ಮಗ್ರಂಥವಾದ ಭಗವದ್ಗೀತೆಯನ್ನು(Bhagavadgita) ಅಳವಡಿಸುವ ಸರ್ಕಾರದ ಕ್ರಮವನ್ನು ಕಾಂಗ್ರೆಸ್(Congress) ಪಕ್ಷ ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದು ರಾಜ್ಯ(State) ಕಾಂಗ್ರೆಸ್(Congress) ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivkumar) ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಭಗವದ್ಗೀತೆ ನಮ್ಮ ದೇಶದ ಅಸ್ಮಿತೆ. ಅದು ನಮ್ಮ ಸಂಸ್ಕøತಿಯ ಭಾಗವಾಗಿದೆ. ಹೀಗಾಗಿ ಶಾಲಾ ಪಠ್ಯದಲ್ಲಿ ಅದನ್ನು ಅಳವಡಿಸುವ ಸರ್ಕಾರದ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಈ ಹಿಂದೆ ರಾಮಾಯಣ ಮತ್ತು ಮಾಹಾಭಾರತ ಮಹಾಕಾವ್ಯಗಳನ್ನು ದೂರದರ್ಶನದ ಮೂಲಕ ಎಲ್ಲರಿಗೂ ತಲುಪಿಸಿದ್ದು ಕಾಂಗ್ರೆಸ್. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಭಗವದ್ಗೀತೆಯನ್ನು ಅಳವಡಿಸುವುದರಲ್ಲಿ ತಪ್ಪೇನಿದೆ ಎಂದು ಮಾದ್ಯಮಗಳಿಗೆ ಮರಳಿ ಪ್ರಶ್ನಿಸಿದರು.

ಇನ್ನು ಕೆಲ ದಿನಗಳ ಹಿಂದೆ ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುವ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದರು. ಆದರೆ ಇದೀಗ ಉಲ್ಟಾ ಹೊಡೆದಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮಾತನಾಡಿ, “ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುವುದು ಸೂಕ್ತವಲ್ಲ, ಶಾಲಾ ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಗಮನ ಹರಿಸಬೇಕಿದೆ” ಎಂದಿದ್ದರು. ಇನ್ನೊಂದೆಡೆ ತನ್ವೀರ್ ಸೇಠ್ “ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುವುದು ಕೊರೊನಾಗಿಂತ ಭೀಕರ” ಎಂದಿದ್ದರು. ಆದರೆ ಇದೀಗ ಕಾಂಗ್ರೆಸ್ ಪಕ್ಷ ತನ್ನ ನಿಲುವು ಬದಲಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನದ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಸದಸ್ಯತ್ವ ಅಭಿಯಾನವನ್ನು ಉತ್ತಮ ರೀತಿಯಲ್ಲಿ ಮಾಡಿದ್ದೇವೆ. ಇನ್ನು ಏಳು ದಿನಗಳಿವೆ, ಅದರೊಳಗೆ ನಿರೀಕ್ಷಿತ ಗುರಿ ತಲುಪಲಾಗುವುದು. ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಡಿಜಿಟಲ್ ಅಭಿಯಾನಕ್ಕೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ತಿಳಿಸಿದರು.

Exit mobile version