ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ: ಅಸಮಾಧಾನ ವ್ಯಕ್ತಪಡಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

New Delhi: ನಿನ್ನೆ (ಫೆ.1) ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (D K Suresh) ಅವರು, ಪ್ರತ್ಯೇಕ ರಾಷ್ಟ್ರ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಶುಕ್ರವಾರ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳಲ್ಲಿಯೂ ಪ್ರತಿಧ್ವನಿಸಿದ್ದು, ಹೇಳಿಕೆ ಕುರಿತು ಬಿಜೆಪಿ (BJP) ಸಂಸದರು, ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಪಟ್ಟುಹಿಡಿದರು. ಇದೇ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಸಮಾಧಾನ ವ್ಯಕ್ತಪಡಿಸಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ (Indira Gandhi And Rajeev Gandhi) ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ ಡಿ.ಕೆ.ಸುರೇಶ್ ಹಾಗೆ ಹೇಳಿಲ್ಲ ಎಂದು ಹೇಳಿದ್ದು, ಅದನ್ನು ಚರ್ಚಿಸಬಾರದು ಎಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದರು.

ಡಿ.ಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ (Piyush Goyal) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ರಾಷ್ಟ್ರವನ್ನು ಒಡೆಯುವ ಬಗ್ಗೆ ಯಾರಾದರೂ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ. ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಖರ್ಗೆ, ದೇಶ ವಿಭಜಿಸುವ ಮಾತುಗಳನ್ನು ಯಾರೇ ಆಡಿದರೂ ಸಹಿಸಲ್ಲ ಎಂದರು.

ಏನಿದು ಪ್ರಕರಣ?
ಡಿಕೆ ಸುರೇಶ್ ಅವರು ಗುರುವಾರ ಕೇಂದ್ರದ ಮಧ್ಯಂತರ ಬಜೆಟ್ (Budget)​ ಟೀಕಿಸುವ ಭರದಲ್ಲಿ ನೀಡಿದ್ದ ಪ್ರತ್ಯೇಕ ರಾಷ್ಟ್ರ ಹೇಳಿಕೆ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ನಾಯಕರು ಇವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್​ ಕ್ಷಮೆಕೇಳಬೇಕು- ಪ್ರಲ್ಹಾದ್ ಜೋಶಿ
ಸಂವಿಧಾನಕ್ಕೆ ದೇಶ ವಿಭಜನೆ ಬಗ್ಗೆ ಮಾತನಾಡಿ ಅಪಮಾನ ಮಾಡಿದ್ದಾರೆ. ಅನುದಾನ ನೀಡುತ್ತಿಲ್ಲ ಎಂಬ ಸುಳ್ಳು ಆರೋಪ ಮಾಡಿ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ದೇಶ ವಿಭಜನೆ ಮಾಡುವ ಕಾಂಗ್ರೆಸ್​​ನ ಪ್ರಯತ್ನ ಇನ್ನೂ ಮುಂದುವರೆದಿದೆ. ಈ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಹಾಗೂ ಕ್ಷಮೆ ಕೇಳಬೇಕು ಎಂದು ಡಿ.ಕೆ ಸುರೇಶ್ ಹೇಳಿಕೆಯನ್ನು ಸಚಿವ ಪ್ರಲ್ಹಾದ್ ಜೋಶಿ (Prahlad Joshi) ಲೋಕಸಭೆಯಲ್ಲಿ ಪ್ರಸ್ತಾಪಿಸಿದರು.

ಭವ್ಯಶ್ರೀ ಆರ್ ಜೆ

Exit mobile version