• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ದೆಹಲಿಗೆ ದೌಡು; ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ದೆಹಲಿಗೆ ದೌಡು; ಹೈಕಮಾಂಡ್ ಜೊತೆ ಮಹತ್ವದ ಚರ್ಚೆ
0
SHARES
7
VIEWS
Share on FacebookShare on Twitter

ಸಚಿವ ಸಂಪುಟದ ಗೊಂದಲಕ್ಕೆ (DK to Delhi to ease cabinet ) ಬ್ರೇಕ್ ಹಾಕಲು ಡಿಕೆಶಿ ಪ್ಲ್ಯಾನ್

ಸಚಿವ ಸ್ಥಾನ, ಖಾತೆ ಹಂಚಿಕೆ, ಮಹಿಳಾ ಪ್ರಾತಿನಿಧ್ಯದ ಬೇಡಿಕೆಗಳ ನಡುವೆ ಹೈಕಮಾಂಡ್ ಜೊತೆ ಚರ್ಚೆ

ಅತೃಪ್ತ ಶಾಸಕರ ಸಮಾಧಾನಕ್ಕೆ ಹೊಸ ಸೂತ್ರ; ಅಧಿವೇಶನಕ್ಕೂ ಮುನ್ನ ಸಮಸ್ಯೆ ಬಗೆಹರಿಸುವ ಯತ್ನ

Bengaluru : ಕರ್ನಾಟಕ ಕಾಂಗ್ರೆಸ್‌ನಲ್ಲಿ ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯ ಬಳಿಕ (DK to Delhi to ease cabinet) ಕಾಣಿಸಿಕೊಂಡಿರುವ ಅಸಮಾಧಾನ ಹಾಗೂ ಆಂತರಿಕ ಬಿಕ್ಕಟ್ಟನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ಆಗಸ್ಟ್ 13ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಿಎಂ ಅವರ ದೆಹಲಿ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

DK to Delhi to ease cabinet

ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ, ಖಾತೆ ಹಂಚಿಕೆ ಕುರಿತ ಗೊಂದಲ ಹಾಗೂ ಸಂಪುಟದಲ್ಲಿ (DK to Delhi to ease cabinet) ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂಬ ಬೇಡಿಕೆಗಳ ಕುರಿತು ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಅವರು ಚರ್ಚಿಸುವ ನಿರೀಕ್ಷೆಯಿದೆ.

ಸಂಪುಟ ವಿಸ್ತರಣೆಯ ಬಳಿಕ ಪಕ್ಷದೊಳಗೆ ಹೆಚ್ಚುತ್ತಿರುವ ಅಸಮಾಧಾನವನ್ನು ನಿಯಂತ್ರಿಸಿ, ಅಧಿವೇಶನಕ್ಕೂ ಮುನ್ನ ಸರ್ಕಾರ ಮತ್ತು ಪಕ್ಷದೊಳಗಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸಿಎಂ ಮುಂದಿರುವ ಪ್ರಮುಖ ಸವಾಲಾಗಿದೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಶಿವಕುಮಾರ್ ಭೇಟಿ ಮಾಡುವ ಸಾಧ್ಯತೆಯಿದೆ.

ಕಾಂಗ್ರೆಸ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವೇಣುಗೋಪಾಲ್ ಈಗಾಗಲೇ ಹೈಕಮಾಂಡ್‌ಗೆ (Highcommand) ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನದಿಂದ ವಂಚಿತರಾದ ಶಾಸಕರನ್ನು ಸಮಾಧಾನಪಡಿಸಲು ಸಂಪುಟದಲ್ಲಿ ಸಣ್ಣ ಮಟ್ಟದ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿರುವುದು ಕೂಡ ಪಕ್ಷದೊಳಗಿನ ಅಸಮಾಧಾನದ ತೀವ್ರತೆಯನ್ನು ತೋರಿಸಿದೆ.

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಬೈಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರ ಸಚಿವ ಸ್ಥಾನದ ಬೇಡಿಕೆಯೂ ಹೈಕಮಾಂಡ್ ಚರ್ಚೆಯಲ್ಲಿ ಪ್ರಮುಖವಾಗುವ ಸಾಧ್ಯತೆಯಿದೆ.

ಇದೇ ವೇಳೆ ಸಚಿವ ಸಂಪುಟದ ಪಟ್ಟಿಯನ್ನು ಮೂರು ಬಾರಿ ಬದಲಿಸಿರುವುದಕ್ಕೆ ಮಾಜಿ ಸಚಿವ ಕೆ.ಎನ್. ರಾಜಣ್ಣ (K.N.Rajanna) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಇತಿಹಾಸದಲ್ಲೇ ಇಂತಹ ಬೆಳವಣಿಗೆ ಅಪರೂಪವಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಗೊಂದಲವಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಅವರು ಹೇಳಿದ್ದಾರೆ.

ಆದರೆ ಸಂಪುಟ ಪುನಾರಚನೆ ವೇಳೆ ಸಣ್ಣಪುಟ್ಟ ಅಸಮಾಧಾನ ಸಹಜವಾಗಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ಗಂಭೀರ ಸಮಸ್ಯೆಯಾಗುವುದಿಲ್ಲ ಎಂಬ ಅಭಿಪ್ರಾಯವನ್ನೂ

ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಶಿವಕುಮಾರ್ ರಾಜ್ಯದಲ್ಲೇ ಅಸಮಾಧಾನ ಶಮನಗೊಳಿಸಲು ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದರು.

ಹಿರಿಯ ನಾಯಕ ಟಿ.ಬಿ. ಜಯಚಂದ್ರ (T.B.Jayaram) ಸೇರಿದಂತೆ ಕೆಲವರನ್ನು ಮನವೊಲಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಅಲ್ಲದೆ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವ ಸಿಎಂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿಯಾಗಿದ್ದಾರೆ.

ಮತ್ತೊಂದೆಡೆ ಪ್ರಮುಖ ಖಾತೆಗಳನ್ನು ಪಡೆಯಲು ಸಚಿವರ ಲಾಬಿ ಕೂಡ ತೀವ್ರಗೊಂಡಿದೆ. ಕೆ.ಎಚ್. ಮುನಿಯಪ್ಪ ಹಾಗೂ ನೂತನ ಸಚಿವ ಶಿವರಾಜ್ ತಂಗಡಗಿ ದೆಹಲಿಯಲ್ಲಿ ನಾಯಕತ್ವವನ್ನು ಭೇಟಿ ಮಾಡಲು ಮುಂದಾಗಿದ್ದಾರೆ.

ಸಮಾಜ ಕಲ್ಯಾಣ ಖಾತೆಗಾಗಿ ಮುನಿಯಪ್ಪ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪುತ್ರಿ ರೂಪಕಲಾ ಶಶಿಧರ್ ಅವರಿಗೆ ಅವಕಾಶ

ಮಾಡಿಕೊಡುತ್ತಾರೆ ಎಂಬ ಚರ್ಚೆಯನ್ನು ಅವರು ತಳ್ಳಿಹಾಕಿದ್ದಾರೆ. ಶಿವರಾಜ್ ತಂಗಡಗಿ ಅವರಿಗೂ ಪ್ರಮುಖ ಖಾತೆಯೊಂದರ ಮೇಲೆ ಆಸಕ್ತಿ ಇದೆ ಎನ್ನಲಾಗಿದೆ.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಹೆಸರು ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ.

ರೋಣ ಶಾಸಕ ಜಿ.ಎಸ್. ಪಾಟೀಲ್ ಬದಲಿಗೆ ಮಾಜಿ ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಂಪುಟಕ್ಕೆ ಕರೆತರುವ ಸಾಧ್ಯತೆ, ಎಂ. ಕೃಷ್ಣಪ್ಪ ಅವರಿಗೆ ಅವಕಾಶ ಕಲ್ಪಿಸಲು ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆ ಸೇರಿದಂತೆ ಹಲವು ಆಯ್ಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿಸುವ ಬಗ್ಗೆಯೂ ಕಾಂಗ್ರೆಸ್ ನಾಯಕತ್ವ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ರಿಜ್ವಾನ್ ಅರ್ಷದ್ ಅವರ ಬದಲಿಗೆ ಕಣೀಜ್ ಫಾತಿಮಾ ಅವರನ್ನು ಸಚಿವರನ್ನಾಗಿ ಮಾಡುವ ಸಾಧ್ಯತೆಯ ಕುರಿತು ಚರ್ಚೆ ನಡೆದಿದೆ.

ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರನ್ನು ಸಮಾಧಾನಪಡಿಸುವ ಸಾಧ್ಯತೆಯೂ ಇದೆ.

ಯಶವಂತ ರಾಯಗೌಡ ಪಾಟೀಲ್, ಅಪ್ಪಾಜಿ ನಾಡಗೌಡ, ಶರತ್ ಬಚ್ಚೇಗೌಡ, ಎಸ್.ಆರ್. ಶ್ರೀನಿವಾಸ್, ಬಿ.ಜಿ. ಗೋವಿಂದಪ್ಪ ಸೇರಿದಂತೆ ಹಲವು ನಾಯಕರ ಹೆಸರುಗಳು ಈ ಪಟ್ಟಿಯಲ್ಲಿ ಕೇಳಿಬರುತ್ತಿವೆ.

ಈ ಎಲ್ಲ ಬೆಳವಣಿಗೆಗಳ ನಡುವೆ, “ಅಧಿಕಾರ ಶಾಶ್ವತವಲ್ಲ” ಎಂದು ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರಿಗೆ ಸಂದೇಶ ನೀಡಿದ್ದಾರೆ. ಮುಂಗಾರು ಅಧಿವೇಶನಕ್ಕೂ

ಮುನ್ನ ಅಸಮಾಧಾನಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Tags: bengaluruCongressdkshivakumarhighcommandmeetingpolitics

Related News

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ
ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ

October 15, 2026
ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.