ಕೊಡಗಿನ ಪರಿಸ್ಥಿತಿ ಶೋಚನೀಯವಾಗಿದ್ದು, ಬಿಜೆಪಿ ಸರ್ಕಾರ ಯಾರೊಬ್ಬರಿಗೂ ನೆರವು ನೀಡುತ್ತಿಲ್ಲ : ಡಿಕೆಶಿ

Bommai

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ(Rain) ಆರ್ಭಟ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ರಾಜ್ಯದ(State) ಪ್ರಮುಖ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಗಳೂರು, ಉಡುಪಿ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮತ್ತಷ್ಟು ಪ್ರದೇಶಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಮಳೆಯ ಅವಾಂತರದಿಂದ ಗುಡ್ಡ ಕುಸಿತ ಉಂಟಾಗಿದೆ.

ಕರಾವಳಿ ಪ್ರದೇಶಗಳಲ್ಲಿ(Coastal Regions) ಎಡಬಿಡದೆ ಸುರಿಯುತ್ತಿರುವ ಧಾರಕಾರ ಮಳೆಯಿಂದ ನಗರದ ಮುಖ್ಯ ರಸ್ತೆಗಳು, ಮನೆಗಳು ಮಳೆನೀರಿನಿಂದ ಜಲಾವೃತಗೊಂಡಿದೆ. ಮಳೆಯಿಂದ ತತ್ತರಿಸಿರುವ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ಮಳೆಯಿಂದ ಉಂಟಾದ ಹಾನಿಯನ್ನು ವೀಕ್ಷಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ(Basavaraj Bommai) ಅವರು ನೆರೆ ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಿದರು ಹಾಗೂ ಅಧಿಕಾರಿಗಳಿಗೆ ಮುಂದಿನ ಸೂಚನೆಗಳನ್ನು ನೀಡಿದರು.

ಸಿಎಂ ಬೊಮ್ಮಾಯಿ ಅವರ ಭೇಟಿ ಕುರಿತು ಮಾತನಾಡಿದ ಕಾಂಗ್ರೆಸ್ ಪಕ್ಷದ(Congress Party) ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್(DK Shivkumar), “ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗುವಂತೆ ಮುಖ್ಯಮಂತ್ರಿಗಳು ಸಚಿವರ ಬಳಿ ಮನವಿ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು, ಯಾವುದೇ ಸಚಿವರು ತಮ್ಮ ಜವಾಬ್ದಾರಿಗೆ ಅನುಸಾರವಾಗಿ ಕೆಲಸ ನಿರ್ವಹಿಸುತ್ತಿಲ್ಲ. ರಾಜ್ಯದ ಕೊಡಗು ಜಿಲ್ಲೆ ಮಳೆಗೆ ಸಿಲುಕಿದೆ. ಕೊಡಗು ಪರಿಸ್ಥಿತಿ ಶೋಚನೀಯವಾಗಿದ್ದು,

ಬಿಜೆಪಿ ಸರ್ಕಾರ ಯಾರೊಬ್ಬರಿಗೂ ನೆರವು ನೀಡುತ್ತಿಲ್ಲ” ಎಂದು ರಾಜ್ಯ ಬಿಜೆಪಿ ಹಾಗೂ ಸಿಎಂ ಬೊಮ್ಮಾಯಿ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ತೋರಿದ್ದಾರೆ.

Exit mobile version