ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: ಪ್ರತ್ಯೇಕ ತನಿಖೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ

Bengaluru: ಬೆಂಗಳೂರಿನ ವೀರಭದ್ರನಗರದ ಗ್ಯಾರೇಜ್‌ನಲ್ಲಿ (Garage) ನಿನ್ನೆ (ಸೋಮವಾರ ಅ. ೩೦) ಬೆಂಕಿ ಅವಘಡ ಸಂಭವಿಸಿದ್ದು, ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸ್‌ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ (D.K.Shivakumar) ತಿಳಿಸಿದ್ದಾರೆ.

ಅಗ್ನಿ ಅನಾಹುತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೆಲ್ಡಿಂಗ್‌(Weliding) ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್‌ಗೆ ಬೆಂಕಿ ತಗುಲಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಅದೃಷ್ಟವಶಾತ್‌ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬೇಗನೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ಹೇಳಿದರು.

ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಿದ್ದೇನೆ. ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ. ಪಟಾಕಿ ದುರಂತದ ನಂತರ ಅಗ್ನಿ ಅವಘಡಗಳ ತಡೆಗೆ ಕಠಿಣ ಕ್ರಮ ಕೈಗೊಂಡಿದ್ದೇವೆ. ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಹೇಳಿದ್ದೇವೆ’ ಎಂದರು.

ಗ್ಯಾರೇಜ್‌ನ (Garage) ಮಾಲೀಕರು ನಿರ್ಲಕ್ಷ್ಯ ತೋರಿದ್ದು, ಗ್ಯಾರೇಜ್‌ನಲ್ಲಿ ಬೆಂಕಿ ನಂದಿಸುವ ಉಪಕರಣಗಳು ಜಾಸ್ತಿ ಇರಲಿಲ್ಲ. ಗ್ಯಾರೇಜ್‌ನಲ್ಲಿ ಸಾಕಷ್ಟು ಬಸ್‌ಗಳು ಇದ್ದರೂ ಒಳಗೆ ಪ್ರವೇಶಿಸಲು ಒಂದು ಗೇಟ್‌ ಮಾತ್ರ ಇದೆ ನಿರ್ಗಮನಕ್ಕೆ ಗೇಟ್‌ (Gate) ಇಲ್ಲ. ತಪ್ಪು ಯಾರದ್ದು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಭವ್ಯಶ್ರೀ ಆರ್.ಜೆ

Exit mobile version