ರಮೇಶ್ ಕುಮಾರ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿ.ಕೆ ಶಿವಕುಮಾರ್‌

DKS

ಕಾಂಗ್ರೆಸ್(Congress President) ಅಧಿನಾಯಕಿ ಸೋನಿಯಾ ಗಾಂಧಿಯನ್ನು(Sonia Gandhi) ಇ.ಡಿ(ED) ವಿಚಾರಣೆಗೆ ಒಳಪಡಿಸಿದ್ದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಇದೇ ರೀತಿ ಕರ್ನಾಟಕ(Karnataka) ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ(Congress Party) ಬೆಂಗಳೂರಿನ, ಫ್ರೀಡಂಪಾರ್ಕ್(Freedom park) ಮುಂದೆ ಪ್ರತಿಭಟನೆ ನಡೆಸಿತು. ಈ ವೇಳೆ ಕಾಂಗ್ರೆಸ್‌ ಶಾಸಕ ರಮೇಶ್‌ ಕುಮಾರ್‌(Ramesh Kumar), ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಲ್ಲಿ ಕಾಂಗ್ರೆಸ್ ಸಾಕಷ್ಟು ಹಣ ಸಂಪಾದನೆ ಮಾಡಿದ್ದಾರೆ ಎಂದು ಟೀಕಿಸಿದ್ದರು.

ಕಾಂಗ್ರೆಸ್ ನಾಯಕರು, ಗಾಂಧಿ ಹೆಸರಿನಲ್ಲಿ ಸಾಕಷ್ಟು ಹಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ನೀಡುತ್ತಿದ್ದಂತೆ, ಸಾಕಷ್ಟು ಚರ್ಚೆಗಳು ಬುಗಿಲೆದ್ದವು. ಈ ಹೇಳಿಕೆಯ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್(DK Shivkumar) ಮಾತನಾಡಿ, ರಮೇಶ್ ಕುಮಾರ್ ಹೇಳಿಕೆಯನ್ನು “ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಪ್ಪಾಗಿ ಹೇಳಲಾಗಿದೆ” ಎಂದು ಹೇಳಿದ್ದಾರೆ. ಜವಾಹರಲಾಲ್ ನೆಹರು, ಇಂದಿರಾಗಾಂಧಿ, ಸೋನಿಯಾ ಗಾಂಧಿ ಹೆಸರಿನಲ್ಲಿ 3-4 ತಲೆಮಾರುಗಳಿಗೆ ಸಾಕಾಗುವಷ್ಟು ಹಣ ಸಂಪಾದಿಸಿದ್ದೇವೆ, ಇಷ್ಟೂ ತ್ಯಾಗ ಮಾಡದಿದ್ದರೆ ನಮಗೆ ಒಳ್ಳೆಯದಾಗುವುದಿಲ್ಲ ಎಂದು ರಮೇಶ್ ಕುಮಾರ್ ಗುರುವಾರ ಹೇಳಿದರು.

ಸೋನಿಯಾ ಗಾಂಧಿ ವಿರುದ್ಧದ ಇ.ಡಿ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ರಮೇಶ್ ಕುಮಾರ್ ಮಾತನಾಡಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ(Rahul Gandhi) ಇಬ್ಬರೂ ಕೂಡ ಪ್ರಧಾನಿಯಾಗುತ್ತಿದ್ದರು, ಪ್ರಧಾನಿಯಾಗುವ ಸಾಧ್ಯತೆಗಳಿತ್ತು. ಆದ್ರೆ, ಅವರು ತ್ಯಾಗ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಹಾಜರುಪಡಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಾವಳಿಗಳ ಸುತ್ತನ್ನು ಈಗಾಗಲೇ ಆರಂಭಿಸಿದೆ.


ಇನ್ನು ಸೋನಿಯಾ ಗಾಂಧಿ ಅವರು ಗುರುವಾರ ದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದರು. ಈ ತನಿಖೆಯು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್-ಪ್ರಚಾರದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಮತ್ತು ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇ.ಡಿ ವಿರುದ್ಧ ಸಿಡಿದೆದ್ದು, ಸೋನಿಯಾ ಗಾಂಧಿ ಅವರನ್ನು ಬೆಂಬಲಿಸಿ ರ್ಯಾಲಿ ನಡೆಸಿದರು.

Exit mobile version