ಬಂಡಾಯ ಏಳುವಂತಿರುವ ಡಿ.ವಿ ಸದಾನಂದ ಗೌಡರಿಗೆ ಕಾಂಗ್ರೆಸ್ ಗಾಳ!

Bengaluru: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ (BJP) ಸಂಕಷ್ಟಕ್ಕೆ ಸಿಲುಕಿದೆ. ತಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ತಮ್ಮ ಮನೆಗೆ ಅನ್ಯಾಯವಾಗಿದೆ.. ಹೀಗೆ ಹಲವು ಕಾರಣಗಳನ್ನಿಟ್ಟುಕೊಂಡು ಬಿಜೆಪಿಯ ಪ್ರಮುಖ ನಾಯಕರು ಒಳಗೊಳಗೆ ಕೆಂಡಕಾರುತ್ತಿದ್ದಾರೆ. ಆದರೆ, ಕೆಎಸ್ ಈಶ್ವರಪ್ಪ ಮಾತ್ರ ಬಹಿರಂಗವಾಗಿ ಬಂಡಾಯ ನಿಂತಿದ್ದಾರೆ.

ಇನ್ನು ಅವರಂತೆ ಬೆಂಗಳೂರು (Bengaluru) ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ (D V Sadanandagowda) ಅವರಿಗೆ ಟಿಕೆಟ್ ಮಿಸ್ ಆಗಿದ್ದು, ಬಂಡಾಯ ಏಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಅದೇ ಕಾರಣಕ್ಕೆ ಅವರನ್ನು ತಮ್ಮತ್ತ ಸೆಳೆಯಲು ಕಾಂಗ್ರೆಸ್ ಕೂಡ ಪ್ರಯತ್ನ ಪಡುತ್ತಿದೆ. ಒಕ್ಕಲಿಗ ನಾಯಕರಾಗಿರುವ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಕಾಂಗ್ರೆಸ್‌ (Congress) ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ (NDA) ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.

ಕಾಂಗ್ರೆಸ್‌ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಹಿನ್ನೆಲೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.ಇನ್ನೂ ಅದಕ್ಕಾಗಿ ಮಂಗಳವಾರ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯುವುದಿಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಹೀಗಿದ್ದರೂ ತಿಳಿದೂ ತಿಳಿದೂ ಹೀಗೆ ಮಾಡಿರುವುದು ಬೇಜಾರು ತಂದಿದೆ ಎಂದು ತಿಳಿಸಿದ್ದಾರೆ.

Exit mobile version