DCM D.K Shivakumar issued an order to close and repair potholes within 15 days.
Bengaluru: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು (Accidents) ಹೆಚ್ಚುತ್ತಿರುವ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು. ವಾಹನ ಚಾಲಕರು ಕೆಲ ರಸ್ತೆಗಳಲ್ಲಿ ಪರದಾಡುವಂತಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈಗಾಗಲೇ ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು “ರಸ್ತೆ ಗುಂಡಿ ಗಮನ” ಎನ್ನುವ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ (Photo) ತೆಗೆದು ಅಪ್ ಲೋಡ್ (Upload) ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಕೇಳಿ ಬರುತ್ತಿವೆ.
ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇಲ್ಲವೇ ಕಳಪೆ ಕಾಮಗಾರಿ ಕೂಡ ಆಗಿರಬಹುದು ಹಾಗಾಗಿ ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ (D K Shivakumar) ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮೊದಲು ಎಲ್ಲ ರಸ್ತೆಗಳಲ್ಲಿ ಸಂಚರಿಸಿ ಪರಿಶೀಲಿಸಿ ನಂತರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ದೂರು ಕೇಳಿ ಬಂದಿರುವ ರಸ್ತೆಗಳ ಗುಂಡಿ ತುಂಬಿಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದು, ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದೇವೆ ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.