Bengaluru: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ (Loksabha Election) ನಡೆಯುವ ಹಿನ್ನೆಲೆ ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸಹೋದರ ಡಿಕೆ ಸುರೇಶ್ ಅವರ ಪರ ಪ್ರಚಾರ ನಡೆಸಿದ್ದಾರೆ. ಭಾನುವಾರ ಅಪಾರ್ಟ್ಮೆಂಟ್ ನಿವಾಸಿಗಳ ಜೊತೆ ಮಾತುಕತೆ ನಡೆಸಿದ್ದು, ಈ ವೇಳೆ ಮತದಾರರಿಗೆ ಎಚ್ಚರಿಕೆ ನೀಡಿರುವ ಡಿಕೆ ಶಿವಕುಮಾರ್ (D.K Shivakumar) ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಮಾಡಿಸುವ ನಿರೀಕ್ಷೆ ಮಾಡಬೇಡಿ. ಯಾರ ಮುಖ ನೋಡಿ ಮತ ಹಾಕಿದ್ದೀರಿ ಅವರ ಬಳಿಯೇ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಹೇಳಿ. ಅದನ್ನು ಬಿಟ್ಟು ಕೆಲಸ, ಪರಿಹಾರ ಎಂದು ನಮ್ಮ ಬಳಿ ಬರಬೇಡಿ ಎಂದು ಹೇಳಿದ್ದಾರೆ.
ನಮ್ಮ ಮೇಲೆ ವಿಶ್ವಾಸ ಇಟ್ಟು ನಮ್ಮ ಪರ ನಿಂತರೆ, ನಾವು ಮುಂದೆ ನಿಂತು ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ. ಅವರನ್ನು ನಂಬಿಕೊಂಡರೆ ಏನೂ ಆಗುವುದಿಲ್ಲ, ನಿಮಗೆ ನೀರು ಕೊಟ್ಟು, ರಸ್ತೆ ಹಾಗೂ ಇತರೆ ಸಮಸ್ಯೆಯನ್ನು ನಾವು ಬಗೆಹರಿಸುತ್ತೆವೆಯೇ ಹೊರತು, ದಿಲ್ಲಿಯಲ್ಲಿ (Delhi) ಕುಳಿತವರು ನಿಮ್ಮ ಸಮಸ್ಯೆಗೆ ಪರಿಹಾರ ನೀಡುವುದಿಲ್ಲ. ಹಾಗಾಗಿ ಎಂದಿಗೂ ನಿಮ್ಮ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಅಪಾರ್ಟ್ಮೆಂಟ್ ನಿವಾಸಿಗಳ ಮತ ಸೆಳೆಯಲು ಹೇಳಿಕೆ ನೀಡಿದ್ದಾರೆ.ಕುಡಿಯುವ ನೀರು, ಸಂಚಾರ ದಟ್ಟಣೆ ಸಮಸ್ಯೆ ಬಗ್ಗೆ ನಿವಾಸಿಗಳು ಗಮನ ಸೆಳೆದಿದ್ದಾರೆ. ಡಿಕೆ ಸುರೇಶ್ (D.K Suresh) ಅವರಿಗೆ ಮತ ನೀಡುವಂತೆ ಕೇಳಿಕೊಂಡಿದ್ದಾರೆ.
ಇನ್ನು, ಇದೇ ವೇಳೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ನೀರಿನ ಸಮಸ್ಯೆ ಬಗೆಹರಿಸಲು ಬದ್ಧನಾಗಿದ್ದೇನೆ ಎಂದು ಹೇಳಿದರು. ಎಚ್.ಡಿ ಕುಮಾರಸ್ವಾಮಿ (H.D. Kumaraswamy) ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.
ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ ಎಂದು ಟೀಕಿಸಿದ್ದಾರೆ. ಅಂದು ನಾನು ಮೇಕೆದಾಟು ಪಾದಯಾತ್ರೆ ಕೈಗೊಂಡಾಗ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ (Mandya) ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.