- ಮಂಗಳೂರಿನ ಪೊಲೀಸರಿಂದ ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ
- ಬೀದರ್ ಮೂಲದ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯ (Doctor targeting students)
- ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಡಾಕ್ಟರ್
Mangalore: ಮಂಗಳೂರಿನಲ್ಲಿ ಡ್ರಗ್ಸ್ ಜಾಲದ ವಿರುದ್ಧ ಸಮರ ಸಾರಿರುವ ಪೊಲೀಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬೀದರ್ ಮೂಲದ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ವೈದ್ಯರ ಬಂಧನದ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಸ್ಫೋಟಕ ಮಾಹಿತಿಗಳು ಕೂಡ ಬೆಳಕಿಗೆ ಬಂದಿವೆ.
ಬೀದರ್ ಮೂಲದ, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್(Prajwal Peenyas) ಬಂಧಿತ ವೈದ್ಯ.

ಪ್ರಜ್ವಲ್ ಪೀಣ್ಯಾಸ್ ಹಾಗೂ ಇತರ ಪೆಡ್ಲರ್ಗಳು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು(Targeting students) ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಡ್ರಗ್ಸ್ ಜಾಲದ(Drug network) ಬೆನ್ನುಬಿದ್ದ ಮಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ, ವೈದ್ಯ ಪ್ರಜ್ವಲ್ ಪೀಣ್ಯಾಸ್ ಕಿಂಗ್ಪಿನ್ ಎಂಬುದು ಗೊತ್ತಾಗಿದೆ.
ಪ್ರಕರಣ ಸಂಬಂಧ ಈವರೆಗೆ ಒಟ್ಟು 9 ಆರೋಪಿಗಳನ್ನು ಬಂಧಿಸಲಾಗಿದೆ.ವೈದ್ಯ ಪ್ರಜ್ವಲ್ ಪೀಣ್ಯಾಸ್ ಈ ಹಿಂದೆ ಮಂಗಳೂರಿನ ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ(Father Muller’s College) ವೈದ್ಯಕೀಯ ವಿದ್ಯಾರ್ಥಿಯಾಗಿದ್ದ.
ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಡ್ರಗ್ಸ್ ಪೂರೈಕೆ ಹಿನ್ನಲೆ ದಾಖಲಾಗಿದ್ದ ಮೂರು ಪ್ರಕರಣಗಳ ಜಾಡು ಹಿಡಿದಾಗ ಪ್ರಜ್ವಲ್ ಪೀಣ್ಯಾಸ್ ಕರ್ಮಕಾಂಡ ಬೆಳಕಿಗೆ ಬಂದಿದೆ.
ಮಂಗಳೂರಿನಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರು ಜನರ ಬಂಧನವಾಗಿತ್ತು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಮಂಗಳೂರಿಗೆ ಈ ಜಾಲ ಡ್ರಗ್ಸ್ ಪೂರೈಕೆ ಮಾಡುತ್ತಿತ್ತು.
ಮಹಾರಾಷ್ಟ್ರಕ್ಕೆ(Maharashtra) ಸೇರಿದ ಇಬ್ಬರು ಮಧ್ಯಪ್ರದೇಶಕ್ಕೆ(Madhya Pradesh) ಸೇರಿದ ಒಬ್ಬರನ್ನ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.ಬೀದರ್ ಮೂಲದ ವೈದ್ಯನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್(Police Commissioner) ಸುಧೀರ್ ಕುಮಾರ್ ರೆಡ್ಡಿ(Sudhir Kumar Reddy) ಮಾಹಿತಿ ನೀಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮಕ್ಕಳು ಡ್ರಗ್ಸ್ ಅಡಿಕ್ಷನ್ಗೆ ಒಳಗಾಗಿದ್ದಾರೆ ಎಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ಮಂಗಳೂರಿನಲ್ಲಿ ನಡೆದಿತ್ತು.
ನಂತರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಇದನ್ನು ಓದಿ : ಬೆಂಗಳೂರಿನ ರಸ್ತೆಗಿಳಿಯಲಿವೆ 148 ಹೊಸ ಎಲೆಕ್ಟ್ರಿಕ್ ಬಸ್ಗಳು : ಇಂದಿನಿಂದ ಸಂಚಾರ ಆರಂಭ
ಇದೀಗ ಪ್ರಜ್ವಲ್ ಪೀಣ್ಯಾಸ್ ಹಾಗೂ ಇತರ ಪೆಡ್ಲರ್ಗಳು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು (Doctor targeting students) ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.