Visit Channel

ವೈದ್ಯರ ಮುಷ್ಕರ ವಾಪಸ್‌

ನವದೆಹಲಿ 31: ದೆಹಲಿಯಲ್ಲಿ ವೈದ್ಯರು ನಡೆಸುತ್ತಿದ್ದ ಮುಷ್ಕರವನ್ನು ವಾಪಾಸ್‌ ಪಡೆದಿದ್ದಾರೆ ದೆಹಲಿಯ ವೈದ್ಯರು ನೀಟ್ ಪಿಜಿ ಕೌನ್ಸೆಲಿಂಗ್ ವಿಳಂಬ ಮತ್ತು ಪೊಲೀಸರು ವೈದ್ಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸು ತ್ತಿದ್ದ ದೆಹಲಿಯ ನಿವಾಸಿ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ.

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಶನ್ (ಫೋರ್ಡಾ) ಮತ್ತು ದೆಹಲಿಯ ಜಂಟಿ ಸಿಪಿ ನಡುವಿನ ಸಭೆಯ ನಂತರ ಮುಷ್ಕರಕ್ಕೆ ಕರೆ ನೀಡಲಾಗಿದೆ. “ಕಳೆದ ಸಂಜೆ ದೆಹಲಿಯ ಜಂಟಿ ಸಿಪಿಯನ್ನು ಭೇಟಿಯಾದೆವು. ದೆಹಲಿ ಪೊಲೀಸರು ಎಫ್‌ಐಆರ್ ಅನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ” ಎಂದು ಫೋರ್ಡಾ ಅಧ್ಯಕ್ಷ ಡಾ ಮನೀಶ್ ಹೇಳಿದ್ದಾರೆ.

ನೀಟ್ ಪಿಜಿ 2021 ಕೌನ್ಸೆಲಿಂಗ್‌ಗಾಗಿ ಅಖಿಲ ಭಾರತ ಕೋಟಾದಲ್ಲಿ (AIQ) EWS ಕೋಟಾ ಪ್ರಶ್ನಿಸುವ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಕೌನ್ಸೆಲಿಂಗ್ ಹಾಗೂ ದಾಖಲಾತಿ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ವೈದ್ಯರು ಒತ್ತಾಯಿಸಿದ್ದರು

Latest News

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.