Medicinal Properties Mine Large Leaf.
Doddapatre Leaves: ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಕೂಡಾ ಬೆಳೆಸುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ (Doddapatre Leaves) ಮಹತ್ವದ ಸ್ಥಾನವಿದೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.
ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ (Health Tips) ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್‌ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.
ಆಫ್ರಿಕಾ (Africa) ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ.
ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು (Cold, Cough) ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.
Doddapatre Leaves Benefits in Kannada
ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ. ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್ ಔಷಧವಾಗಿದೆ (Best Medicine) .ಒಟ್ಟಿನಲ್ಲಿ ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಹಲವು ರೀತಿಯ ಉಪಯೋಗ ಪಡೆಯಬಹುದು ಎಂಬುದರಲ್ಲಿ ಎರಡು ಮಾತಿಲ್ಲ.
Doddapatre Leaves: Medicinal plants were also grown in the backyard along with flower plants. They were used as an ornamental plant and used for medicine. Doddapatre leaves have an important place among such medicinal plants. People of earlier times used to prepare Ayurvedic medicines from the root of this plant. Dodapatra is one such plant.
Many backyard plants provide effective remedies for common ailments. The health benefits of small plants that grow among the flower plants and work to improve health are very great. A large leafy plant is also one of them. This large leafy plant is usually found in the backyard of everyone's house. It can also be grown in a small pot. It is also known as Sambar Soppu or Ajawan Gida.
In African countries, it is used in dishes instead of mint. In South India it is commonly used as a home remedy for fever, cold and cough. Crushed leaves are used as a first aid for wounds or scorpion stings. In southern Karnataka, large quantities of chutney and tambuli are made.
Usually change in food intake, change in weather causes phlegm to build up in the lungs. Due to this, if you get a cold, it will not go away for a long time. A large leafy green is a good home remedy for this. If you grind dodapatra leaf, tulsi leaf and betel leaf and extract the juice and mix it with honey and drink it, cold and cough will go away. Even small children can use this large leafy green as medicine.
If you take a large leafy green leaf and burn it in the fire, extract its juice and add half a spoonful of jaggery to it and drink it, the problem of cold and stuffy nose will get rid of it in one day. Boiling a large green leaf on the fire and then applying it to the scalp will eliminate the cold factor in the body and reduce fever and chills. It is the best medicine for children. There is no doubt that large leaf, which is a mine of health, can be used in many ways in the backyard.